Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಕಿಚ್ಚ ಸುದೀಪ್ ನಾಯಕರಾಗಿರುವ ವಿಕ್ರಾಂತ್ ರೋಣ ಸಿನಿಮಾದ ಮೊದಲ ಹಾಡು ಇಂದು ಬಿಡುಗಡೆಯಾಗಿದೆ.
ಜಾಕ್ವೆಲಿನ್ ಫರ್ನಾಂಡಿಸ್ ಹೆಜ್ಜೆ ಹಾಕಿರುವ ಗಡಂಗ್ ರಕ್ಕಮ್ಮ ಎಂಬ ಐಟಂ ಹಾಡಿನ ಲಿರಿಕಲ್ ವಿಡಿಯೋ ಇಂದು ಬಿಡುಗಡೆಯಾಗಿದೆ. ಇದೀಗ ಕನ್ನಡ ಅವತರಣಿಕೆಯ ಹಾಡು ಮಾತ್ರ ಬಿಡುಗಡೆಯಾಗಿದೆ.
ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆಯಲ್ಲಿ ಭರ್ಜರಿ ಹಾಡು ಪಡ್ಡೆ ಹುಡುಗರು ಹುಚ್ಚೆದ್ದು ಕುಣಿಯುವಂತಿದೆ. ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಭರ್ಜರಿ ವ್ಯೂ ಪಡೆದುಕೊಂಡಿದೆ.