Publish Date: Sat, 02 Apr 2022 (09:30 IST)
Updated Date: Sat, 02 Apr 2022 (09:41 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ಇಂದು ಯುಗಾದಿ ಹಬ್ಬಕ್ಕೆ ಅಭಿಮಾನಿಗಳಿಗೆ ಉಡುಗೊರೆಯಾಗಿ ಸಿಗಲಿದೆ.
ಇಂದು ಬೆಳಿಗ್ಗೆ 9.55 ಕ್ಕೆ ಬಹುಭಾಷೆಗಳಲ್ಲಿ ವಿಕ್ರಾಂತ್ ರೋಣ ಟೀಸರ್ ಬಿಡುಗಡೆಯಾಗಲಿದೆ. ಅನೂಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಟೀಸರ್ ನ್ನು ವಿವಿಧ ಭಾಷೆಗಳಲ್ಲಿ ಆಯಾ ಭಾಷೆಯ ಸ್ಟಾರ್ ಕಲಾವಿದರು ಲಾಂಚ್ ಮಾಡುತ್ತಿದ್ದಾರೆ.
ಮೇನಲ್ಲಿ ವಿಕ್ರಾಂತ್ ರೋಣ ಸಿನಿಮಾ ಬಿಡುಗಡೆಯಾಗುವ ನಿರೀಕ್ಷೆಯಿದೆ. ಸದ್ಯಕ್ಕೆ ಚಿತ್ರತಂಡ ರಿಲೀಸ್ ಡೇಟ್ ಅಧಿಕೃತವಾಗಿ ಪ್ರಕಟಿಸಿಲ್ಲ.