ಬೆಂಗಳೂರು: ತಮಿಳುನಾಡಿನಲ್ಲಿ ಕೊನೆಗೂ ರಾಜ್ಯ ಸರ್ಕಾರ ಶೇ. 100 ವೀಕ್ಷಕರಿಗೆ ಏಕಕಾಲಕ್ಕೆ ಚಿತ್ರ ವೀಕ್ಷಣೆಗೆ ಅವಕಾಶ ಒದಗಿಸಲು ಒಪ್ಪಿಗೆ ನೀಡಿದೆ.
ಕೊರೋನಾ ಕಾರಣದಿಂದ ಚಿತ್ರಮಂದಿರ ತೆರೆದರೂ ಶೇ. 50 ರಷ್ಟು ಪ್ರೇಕ್ಷಕರಿಗೆ ಮಾತ್ರ ಅವಕಾಶ ನೀಡಿದ್ದರಿಂದ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆಯಾಗುತ್ತಿರಲಿಲ್ಲ. ಕರ್ನಾಟಕದಲ್ಲೂ ಇದೇ ಅವಸ್ಥೆ ಮುಂದುವರಿದಿದೆ. ಚಿತ್ರಮಂದಿರ ಭರ್ತಿ ಮಾಡಲು ಅವಕಾಶ ನೀಡದೇ ಸ್ಟಾರ್ ನಟರ ಸಿನಿಮಾ ಬಿಡುಗಡೆ ಮಾಡಲು ನಿರ್ಮಾಪಕರು ಹಿಂದೇಟು ಹಾಕುತ್ತಿದ್ದಾರೆ. ಇದರಿಂದಾಗಿ ಚಿತ್ರರಂಗ ಇನ್ನೂ ಮೊದಲಿನ ಹಳಿಗೆ ಬಂದಿಲ್ಲ. ತಮಿಳುನಾಡು ಬಳಿಕ ಕರ್ನಾಟಕದಲ್ಲೂ ಚಿತ್ರಮಂದಿರದಲ್ಲಿ ಎಲ್ಲಾ ಸೀಟುಗಳನ್ನೂ ಭರ್ತಿ ಮಾಡಲು ಅವಕಾಶ ಕೊಟ್ಟರೆ ಸಾಲು ಸಾಲು ಸಿನಿಮಾಗಳು ಬಿಡುಗಡೆಯಾಗೋದು ಖಂಡಿತಾ.