ಮುಂಬೈ : ಒಂದು ಕಾಲದಲ್ಲಿ ಪಡ್ಡೆ ಹುಡುಗರ ಹೃದಯ ಬಡಿತವನ್ನು ಹೆಚ್ಚಿಸುತ್ತಿದ್ದ ಕೇರಳ ಮೂಲದ ನಟಿ ಶಕೀಲಾ ಅವರ ಜೀವನಾಧಾರಿತ ಚಿತ್ರ ಇಂದ್ರಜೀತ್ ಲಂಕೇಶ್ ಅವರ ನಿರ್ದೇಶನದಲ್ಲಿ ಮೂಡಿಬರಲಿದೆ.
ತಮ್ಮ 16 ನೇ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಪ್ರವೇಶಿಸಿ ಮಲಯಾಳಂ, ತಮಿಳು, ತೆಲುಗು ಹಾಗೂ ಕನ್ನಡ ಸೇರಿದಂತೆ ಹಲವು ಭಾಷೆಯಲ್ಲಿ ನಟಿಸಿದ ನಟಿ ಶಕೀಲಾ ಅವರು ಅರೇ ನೀಲಿ ಚಿತ್ರಗಳಲ್ಲಿ ಹೆಚ್ಚಾಗಿ ನಟಿಸಿ ಭಾರತದಲ್ಲಿ ಮಾತ್ರವಲ್ಲ ಚೀನಾ ಸೇರಿದಂತೆ ಏಷ್ಯಾದ್ಯಂತ ಅಭಿಮಾನಿಗಳನ್ನು ಹೊಂದಿದ್ದಾರೆ. ಆದರೆ ಇವರ ಪಾತ್ರದಲ್ಲಿ ಯಾರು ನಟಿಸುತ್ತಾರೆ ಎಂಬ ಕಾತುರ ಅನೇಕ ಅಭಿಮಾನಿಗಳಲ್ಲಿ ಮೂಡಿತ್ತು. ಇದೀಗ ಬಾಲಿವುಡ್ ನಟಿ ರಿಚಾ ಚಡ್ಡಾ ಅವರು ಶಕೀಲಾ ಅವರ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದು ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿರುವ ಕಾತುರ ಇನ್ನಷ್ಟು ಜಾಸ್ತಿ ಮಾಡಿದೆ. ಈ ಚಿತ್ರ ಏಪ್ರಿಲ್ ತಿಂಗಳಲ್ಲಿ ಸೆಟ್ಟೇರಲಿದ್ದು, 2019ರ ಆರಂಭದಲ್ಲೇ ತೆರೆಗೆ ಬರಲಿದೆ ಎಂಬ ಮಾಹಿತಿ ತಿಳಿದುಬಂದಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ