Webdunia - Bharat's app for daily news and videos

Install App

ಕಿಚ್ಚ ಸುದೀಪ್ ರಾಜ್ಯ ಪ್ರಶಸ್ತಿ ತಿರಸ್ಕರಿಸಿರುವುದರ ಹಿಂದಿದೆ ಒಂದು ನೋವಿನ ಕತೆ

Krishnaveni K
ಶುಕ್ರವಾರ, 24 ಜನವರಿ 2025 (11:16 IST)
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಮಗೆ ಸಿಕ್ಕ ಚಲನಚಿತ್ರ ರಾಜ್ಯ ಪ್ರಶಸ್ತಿಯನ್ನು ತಿರಸ್ಕರಿಸಿದ್ದು ಭಾರೀ ಸುದ್ದಿಯಾಗಿದೆ. ಆದರೆ ಇದರ ಹಿಂದೆ ಒಂದು ಬಲವಾದ ಕಾರಣವಿದೆ.

ಮೊನ್ನೆಯಷ್ಟೇ 2019 ನೇ ಸಾಲಿನ ಕರ್ನಾಟಕ ಚಲನಚಿತ್ರ ರಾಜ್ಯ ಪ್ರಶಸ್ತಿ ಪ್ರಕಟವಾಗಿತ್ತು. ಕಿಚ್ಚ ಸುದೀಪ್ ಗೆ ಪೈಲ್ವಾನ್ ಸಿನಿಮಾದ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದರು. ಆದರೆ ನಿನ್ನೆ ಟ್ವೀಟ್ ಮಾಡಿದ್ದ ಅವರು ಪ್ರಶಸ್ತಿಯನ್ನು ನಯವಾಗಿ ತಿರಸ್ಕರಿಸಿದ್ದರು.

ನನಗಿಂತ ಅರ್ಹರಾಗಿರುವ ನಟರಿಗೆ ಪ್ರಶಸ್ತಿಯನ್ನು ನೀಡಿ. ನನ್ನನ್ನು ಆಯ್ಕೆ ಮಾಡಿದ್ದಕ್ಕೆ ಧನ್ಯವಾದಗಳು. ಅದುವೇ ನನಗೆ ದೊಡ್ಡ ಗೌರವ. ಆದರೆ ಕೆಲವೊಂದು ವೈಯಕ್ತಿಕ ಕಾರಣಗಳಿಂದಾಗಿ ನಾನು ಯಾವುದೇ ಪ್ರಶಸ್ತಿಗಳನ್ನೂ ಸ್ವೀಕರಿಸದೇ ಇರಲು ತೀರ್ಮಾನಿಸಿದ್ದೆ. ಈಗಲೂ ಅದೇ ತೀರ್ಮಾನಕ್ಕೆ ಬಧ್ಧನಾಗಿರುತ್ತೇನೆ ಎಂದು ಸುದೀಪ್ ಮನವಿ ಮಾಡಿದ್ದರು.

ಅವರ ಈ ನಿರ್ಧಾರ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಆದರೆ ಇದರ ಹಿಂದೆಯೂ ಒಂದು ಕಾರಣವಿದೆ. ಈ ಹಿಂದೆ ರಂಗ ಎಸ್ಎಸ್ಎಲ್ ಸಿ (2004) ಮತ್ತು ಮುಸ್ಸಂಜೆ ಮಾತು (2008) ಸಿನಿಮಾಗೆ ಪ್ರಶಸ್ತಿ ಬಂದಾಗ ಪ್ರಶಸ್ತಿ ಕಮಿಟಿಯಲ್ಲಿರುವವರೇ ಫೋನ್ ಮಾಡಿ ನಿಮಗೆ ಪ್ರಶಸ್ತಿ ಬಂದಿದೆ ಎಂದು ಹೇಳಿದ್ದರು. ಹೀಗಾಗಿ ಅವರು ಸಂಭ್ರಮಿಸಿದ್ದರು. ಆದರೆ ಕೊನೆಗೆ ಘೋಷಣೆಯಾದಾಗ ಬೇರೆಯವರ ಹೆಸರು ಘೋಷಣೆಯಾಗಿತ್ತು. ಈ ಘಟನೆ ಸುದೀಪ್ ಗೆ ನೋವು ತಂದಿತ್ತು. ಇದೇ ಕಾರಣಕ್ಕೆ ಸುದೀಪ್ ಯಾವುದೇ ಪ್ರಶಸ್ತಿಗಳನ್ನು ಸ್ವೀಕರಿಸುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Darshan: ವಿವಾಹ ವಾರ್ಷಿಕೋತ್ಸವಕ್ಕೆ ದರ್ಶನ್ ಜೊತೆಗಿರುವ ಫೋಟೋ ಹಾಕಿ ಸಖತ್ ಟಾಂಗ್ ಕೊಟ್ಟ ವಿಜಯಲಕ್ಷ್ಮಿ

Drithi PuneethRajkumar: ಪುನೀತ್ ಮಗಳ ಸಾಧನೆಯನ್ನು ಕೊಂಡಾಡಿದ ಶಿವರಾಜ್‌ಕುಮಾರ್‌

Thug Life Cinema:ನಟಿ ಅಭಿರಾಮಿ ಜತೆ ರೋಮ್ಯಾಂಟಿಕ್ ದೃಶ್ಯದಲ್ಲಿ ಕಮಲ್ ಹಾಸನ್‌, ಇದು ಬೇಕಿತ್ತಾ ಎಂದ ಫ್ಯಾನ್ಸ್‌

Vickey kaushal Birthday: ಪತಿ ಜತೆಗಿನ ಮುದ್ದು ಫೋಟೋ ಶೇರ್ ಮಾಡಿ ವಿಶ್ ಮಾಡಿದ ಕತ್ರಿನಾ

ನಿಜವಾದ ಹೀರೋಗಳ ಬಗ್ಗೆ ಬಾಲಿವುಡ್ ಸೆಲೆಬ್ರಿಟಿಗಳು ಮಾತಾಡ್ತಿಲ್ಲ: ಪವನ್ ಕಲ್ಯಾಣ್ ಅಸಮಾಧಾನ

ಮುಂದಿನ ಸುದ್ದಿ
Show comments