Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈದರಾಬಾದ್ : ಮಹಿಳೆಯೊಬ್ಬಳು ತನ್ನ ಪತಿಯನ್ನು ಚಾಕುವಿನಿಂದ ಇರಿದು ಕೊಂದು ಶವವನ್ನು ಮನೆಯಲ್ಲಿ ಹೂತಿಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಪತಿ ಮದ್ಯ ಸೇವಿಸುತ್ತಿದ್ದು, ತನ್ನ ಮೊದಲ ಪತಿಯಿಂದ ಜನಿಸಿದ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದ. ಇದರಿಂದ ಕೋಪಗೊಂಡ ಮಹಿಳೆ ಇಂತಹ ಕೃತ್ಯ ಎಸಗಿದ್ದಾಳೆ. ಮೃತನ ಕುಟುಂಬದವರು ನಾಪತ್ತೆಯಾದ ದೂರು ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ನಿಯನ್ನು ವಿಚಾರಿಸಿದಾಗ ಆಕೆ ನಿಜಾಂಶ ಬಾಯ್ಬಿಟ್ಟಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.