Publish Date: Sat, 19 Jun 2021 (10:45 IST)
Updated Date: Sat, 19 Jun 2021 (10:46 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಬಗ್ಗೆ ಈಗಲೇ ಸಾಕಷ್ಟು ಹವಾ ಕ್ರಿಯೇಟ್ ಆಗಿದೆ. ಕೆಜಿಎಫ್ 2 ಬಳಿಕ ಯಶ್ ಮತ್ತೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾ ಮಾಡಲಿದ್ದಾರೆ.
ಮುಫ್ತಿ ನಿರ್ದೇಶಕ ನರ್ತನ್ ಸಾರಥ್ಯದಲ್ಲಿ ಸೆಟ್ಟೇರಲಿರುವ ಸಿನಿಮಾದಲ್ಲಿ ಯಶ್ ನೇವೀ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಈಗಾಗಲೇ ಓಡಾಡುತ್ತಿದೆ. ಇದರ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.
ಈಗಾಗಲೇ ಯಶ್ ಕೆಜಿಎಫ್ ಮೂಲಕ ನ್ಯಾಷನಲ್ ಸ್ಟಾರ್ ಆಗಿಬಿಟ್ಟಿದ್ದಾರೆ. ಬೇರೆ ಭಾಷೆಗಳಲ್ಲೂ ಯಶ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ಹೀಗಾಗಿ ಈ ಸಿನಿಮಾವೂ ಪ್ಯಾನ್ ಇಂಡಿಯಾ ಸಿನಿಮಾಗಲಿದೆ ಎನ್ನಲಾಗಿದೆ. ಹೀಗಾಗಿ ಯಶ್ 19 ನೇ ಸಿನಿಮಾ ಬಗ್ಗೆ ನಿರೀಕ್ಷೆಯೂ ಹೆಚ್ಚಿದೆ.