Webdunia - Bharat's app for daily news and videos

Install App

ಉದಯ್, ಅನಿಲ್ ಕುಟುಂಬಕ್ಕೆ ಸರಕಾರದಿಂದ ಆರ್ಥಿಕ ನೆರವು: ಸಚಿವ ಅಂಜನೇಯ

Webdunia
ಮಂಗಳವಾರ, 8 ನವೆಂಬರ್ 2016 (13:05 IST)
ಇಬ್ಬರು ಖಳನಟರು ಮೃತರಾಗಿರುವುದು ನೋವು ತಂದಿದೆ. ಚಿತ್ರತಂಡದ ನಿರ್ಲಕ್ಷವೇ ಅವರ ಸಾವಿಗೆ ಕಾರಣವಾಗಿದೆ. ಸಿಎಂ ಪರಿಹಾರ ನಿಧಿಯಿಂದ ಆರ್ಥಿಕ ನೆರವು ನೀಡಲಾಗುವುದು ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಅಂಜನೇಯ ಹೇಳಿದ್ದಾರೆ.
 
ಇಬ್ಬರು ನಟ ಬಡತನದಲ್ಲಿ ಬೆಳೆದಿರುವ ಬಗ್ಗೆ ಮಾಹಿತಿ ಬಂದಿದೆ. ಖಳನಟ ಉದಯ್ ಮತ್ತು ಅನಿಲ್ ಕುಟುಂಬಕ್ಕೆ ಆರ್ಥಿಕ ನೆರವು ನೀಡಲು ಸರಕಾರ ಚಿಂತನೆ ನಡೆಸಿದೆ ಎಂದು ತಿಳಿಸಿದ್ದಾರೆ. 
 
 ಮಾಸ್ತಿಗುಡಿ ಚಿತ್ರದ ಚಿತ್ರಿಕರಣದ ವೇಳೆ ನಗರದ ತಿಪ್ಪೆಗೊಂಡನಹಳ್ಳಿ ಕೆರೆಯಲ್ಲಿ 100 ಅಡಿ ಎತ್ತರದಿಂದ ಹೆಲಿಕಾಪ್ಟರ್‌‌ನಿಂದ ನೀರಿಗೆ ಧುಮುಕುವ ಕ್ಲೈಮ್ಯಾಕ್ಸ್ ಸನ್ನಿವೇಶದ ಶೂಟಿಂಗ್‌ ಸಂದರ್ಭದಲ್ಲಿ ಇಬ್ಬರು ಸಹನಟರು ವಿಧಿವಶರಾದಂತಹ ಘಟನೆ ಸಂಭವಿಸಿತ್ತು
 
ನಟ ವಿಜಯ್ ಮತ್ತು ಸಹನಟರಾದ ಅನಿಲ್ ಮತ್ತು ಉದಯ್ ಶೂಟಿಂಗ್ ವೇಳೆ ಹೆಲಿಕಾಪ್ಟರ್‌ನಿಂದ ನೀರಿಗೆ ಹಾರಿದ್ದಾರೆ. ಅದರಲ್ಲಿ ಉದಯ್ ಮತ್ತು ಅನಿಲ್ ದಡಕ್ಕೆ ಬರುವಲ್ಲಿ ವಿಫಲವಾಗಿದ್ದರು.
 
ಕೆರೆಯಲ್ಲಿ ಅನಿಲ್ ಮತ್ತು ಉದಯ್‌ ಮೃತ ಶೋಧ ಕಾರ್ಯ ನಡೆದಿದ್ದು, ಇಲ್ಲಿಯವರೆಗೆ ಪತ್ತೆಯಾಗಿಲ್ಲ ಎಂದು ಚಿತ್ರದ ನಿರ್ದೇಶಕರು ತಿಳಿಸಿದ್ದಾರೆ.
 
ಚಾಲೆಂಜಿಂಗ್ ಆಕ್ಷನ್ ದೃಶ್ಯವಿರುವುದರಿಂದ ಡ್ಯೂಪ್ ಬಳಸದಿರಲು ಸಹನಟರು ನಿರ್ಧರಿಸಿದ್ದರು. ನಾವು ಏನು ಅನ್ನುವುದನ್ನು ಪ್ರೂವ್ ಮಾಡುತ್ತೇವೆ ಎಂದು ಸಹನಟರು ಹೇಳಿದ್ದಾಗಿ ಮೂಲಗಳು ತಿಳಿಸಿವೆ.
 
ಸ್ಟಂಟ್ ಮಾಸ್ಟರ್ ರವಿವರ್ಮಾ ಅವರ ನೇತೃತ್ವದಲ್ಲಿ ಚಿತ್ರೀಕರಣ ನಡೆಯುತ್ತಿತ್ತು ಎಂದು ಚಿತ್ರದ ನಿರ್ದೇಶಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments