Webdunia - Bharat's app for daily news and videos

Install App

ಕಾಂಗ್ರೆಸ್ ಅಭ್ಯರ್ಥಿಗಳ ಪರ ಸರಕಾರಿ ಅಧಿಕಾರಿಗಳು: ಯಡಿಯೂರಪ್ಪ ಆರೋಪ

Webdunia
ಶುಕ್ರವಾರ, 24 ಮಾರ್ಚ್ 2017 (13:35 IST)
ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಸರಕಾರಿ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರ ಕಾರ್ಯನಿರ್ವಹಿಸುತ್ತಿದ್ದಾರೆ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ. 
 
ಗುಂಡ್ಲುಪೇಟೆಯ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಚುನಾವಣೆ ಪ್ರಚಾರದಲ್ಲಿ ತೊಡಗಿರುವಾಗ ಅವರೊಂದಿಗಿರುವ ಅಧಿಕಾರಿಗಳು ಹಣವನ್ನು ಹಂಚುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
 
ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಅವರಿಗೆ ಕ್ಷೇತ್ರದ ಜನತೆಯಲ್ಲಿ ಯಾವುದೇ ಆನುಕಂಪದ ಅಲೆಯಿಲ್ಲ. ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
 
ಪೊಲೀಸರು ಕೂಡಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ. ಪೊಲೀಸರ ವರ್ತನೆಯ ಬಗ್ಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ದೂರು ಸಲ್ಲಿಸುವುದಾಗಿ ತಿಳಿಸಿದ್ದಾರೆ.  
 
ಯಡಿಯೂರಪ್ಪಗೆ ತಿರುಗೇಟು: ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ನಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಬಳಿ ಸಾಕ್ಷ್ಯಾಧಾರಗಳಿದ್ದರೆ ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ ಪ್ರಸಾದ್ ಸವಾಲ್ ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments