Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿ: ಕಾಂಗ್ರೆಸ್‌ ನಾಯಕನ ಪರ ಜೆಡಿಎಸ್‌ ಶಾಸಕ ಬ್ಯಾಟಿಂಗ್‌

Sampriya
ಬುಧವಾರ, 8 ಜನವರಿ 2025 (16:50 IST)
Photo Courtesy X
ಬೆಳಗಾವಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿಯಾಗಬೇಕು. 2028-29ನೇ ಸಾಲಿನ ಒಳಗೆ, ಅಂದರೆ ಮುಂದಿನ ವಿಧಾನಸಭೆ ಚುನಾವಣೆಯೊಳಗೆ ಸಿಎಂ ಆಗಬೇಕು ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಹಾಗೂ ಜಿಲ್ಲೆಯ ಗುರುಮಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಗುರುಮಠಕಲ್ ಮತಕ್ಷೇತ್ರದ ಸೈದಾಪುರ ಕ್ರಾಸ್ ಬಳಿ ಸೋಮವಾರ ಭಗವಾನ್ ಮಹರ್ಷಿ ವಾಲ್ಮೀಕಿ ವೃತ್ತ ಅನಾವರಣಕ್ಕೆ ಆಗಮಿಸಿದ್ದ ಸತೀಶ ಜಾರಕಿಹೊಳಿ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಶಾಸಕ, ಜಾರಕಿಹೊಳಿ ಮುಂದಿನ ಸಿಎಂ ಎಂದು ಘೋಷಿಸಿದಾಗ ಕರತಾಡನಗಳು ಮುಗಿಲು ಮುಟ್ಟಿದ್ದವು.

ಸತೀಶ್ ಅಣ್ಣ ಸರಳ ವ್ಯಕ್ತಿತ್ವ ಹೊಂದಿದ್ದಾರೆ. ಉತ್ತಮ ವ್ಯಕ್ತಿತ್ವ ಇರುವ ಜನಪರ ನಾಯಕರಾಗಿದ್ದು, ಇಂತಹ ವ್ಯಕ್ತಿತ್ವ ಹೊಂದಿರುವ ನಾಯಕ ಉನ್ನತ ಸ್ಥಾನಕ್ಕೆ ಅರ್ಹರು. ಸತೀಶ ಜಾರಕಿಹೊಳಿ ಅವರು ಸಿಎಂ ಆದರೆ ನಾನು ಸ್ವಾಗತಿಸುತ್ತೇನೆ ಎಂದು ಹೇಳಿದರು. ಶಾಸಕ ಕಂದಕೂರ ಹೀಗೆ ಹೇಳುತ್ತಿದ್ದಂತೆಯೇ, ಜಾರಕಿಹೊಳಿ ಅಭಿಮಾನಿಗಳು ಸಂತಸದಿಂದ ಘೋಷಣೆ ಕೂಗತೊಡಗಿದರು.

ಜಾರಕಿಹೊಳಿ ಮುಂದಿನ ಸಿಎಂ ಎನ್ನುತ್ತಿದ್ದಂತೆಯೇ ಇದು ಮತ್ತೊಂದು ವಿವಾದಕ್ಕೆ ಕಾರಣವಾಗಬಾರದೆಂದು ಮನಗಂಡ ಸತೀಶ್ ಜಾರಕಿಹೊಳಿ ಅವರು, ಘೋಷಣೆ ಕೂಗದಂತೆ ಅಭಿಮಾನಿಗಳಿಗೆ ಕೈಸನ್ನೆ ಮಾಡಿ ಸುಮ್ಮನಾಗಿಸಿದರು.

ಶಾಸಕನ ಈ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸತೀಶ್ ಜಾರಕಿಹೊಳಿ, ರಾಜ್ಯದ ಎಲ್ಲ ಭಾಗಗಳಲ್ಲಿ ನನ್ನ ಅಭಿಮಾನಿಗಳು ಇದ್ದಾರೆ. ನಾನು ಅವರನ್ನು ಭೇಟಿ ಮಾಡಿದ್ದಾಗ ನೀವು ಮುಂದಿನ ಮುಖ್ಯಮಂತ್ರಿ ಆಗಬೇಕು ಎಂದು ಪ್ರೀತಿಯಿಂದ ಹೇಳುತ್ತಿದ್ದಾರೆ.‌ ಸದ್ಯ ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ. ಬರುವ ದಿನಗಳಲ್ಲಿ ಮುಖ್ಯಮಂತ್ರಿ ಆಗುವುದಕ್ಕೆ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Joe Biden: ಅಮೆರಿಕಾ ಮಾಜಿ ಅಧ್ಯಕ್ಷ ಜೋ ಬೈಡನ್ ಗೆ ಕ್ಯಾನ್ಸರ್

Dharmasthala: ಪಂಜಾಬ್ ನಲ್ಲಿ ಧರ್ಮಸ್ಥಳ ಯುವತಿ ಸಾವು ಪ್ರಕರಣಕ್ಕೆ ಟ್ವಿಸ್ಟ್: ಕಾರಣ ಬಹಿರಂಗ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಮುಂದಿನ ಸುದ್ದಿ
Show comments