ರಾಜ್ಯದಲ್ಲಿ ಸರ್ಕಾರಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯಲು ರಾಜ್ಯ ಸರ್ಕಾರವು ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಕರ್ನಾಟಕ ಪಬ್ಲಿಕ್ ಎಕ್ಸಾಮಿನೇಷನ್ ವಿಧೇಯಕ-2023 ಮಂಡಿಸಲು ತೀರ್ಮಾನಿಸಿದ್ದು, ಇದರಡಿ ಪರೀಕ್ಷಾ ಅಕ್ರಮ ಎಸಗಿದವರಿಗೆ 10 ಕೋಟಿ ರು.ವರೆಗೆ ದಂಡ, 12 ವರ್ಷದವರೆಗೆ ಜೈಲು ಶಿಕ್ಷೆ ಹಾಗೂ ಅಕ್ರಮ ಆಸ್ತಿ ಜಪ್ತಿಯಂತಹ ಕಠಿಣ ನಿಯಮಗಳನ್ನು ಜಾರಿಗೆ ತರಲು ಪ್ರಸ್ತಾಪಿಸಲಾಗಿದೆ.