Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

10 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ: ಕಾಗೋಡು ತಿಮ್ಮಪ್ಪ

10 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ: ಕಾಗೋಡು ತಿಮ್ಮಪ್ಪ
ಬೆಂಗಳೂರು , ಬುಧವಾರ, 12 ಏಪ್ರಿಲ್ 2017 (17:15 IST)
ರಾಜ್ಯದಲ್ಲಿ ಎದುರಾಗಿರುವ ಭೀಕರ ಬರಗಾಲದಿಂದ ತತ್ತರಿಸಿರುವ 10 ಲಕ್ಷ ರೈತರಿಗೆ ಬೆಳೆ ನಷ್ಟ ಪರಿಹಾರ ನೀಡುವುದು ಅಗತ್ಯವಾಗಿದೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.
 
ಕೇಂದ್ರಸರಕಾರದಿಂದ ಹಣ ಬಂದ ಕೂಡಲೇ 5 ಲಕ್ಷ ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಲಾಗುವುದು. ಇನ್ನುಳಿದ ಐದು ಲಕ್ಷ ರೈತರಿಗೆ ಎರಡನೇ ಹಂತದಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ. ರಾಜ್ಯ ಸರಕಾರ ರೈತರ ಸಂಕಷ್ಟಗಳಿಗೆ ಸ್ಪಂದಿಸುವಂತಹ ಕಾರ್ಯದಲ್ಲಿ ನಿರತವಾಗಿದ್ದು ಯಾವುದೇ ರೀತಿಯ ಆತಂಕ ಬೇಡ ಎಂದು ಮನವಿ ಮಾಡಿದ್ದಾರೆ.
 
ರೈತರ ಆರ್ಥಿಕ ಹೊರೆಯಿಂದ ಆತ್ಮಹತ್ಯೆಗೆ ಶರಣಾಗುವುದು ಸರಿಯಲ್ಲ. ಸರಕಾರ ನಿಮ್ಮೊಂದಿಗಿದೆ. ನಿಮ್ಮ ಕಷ್ಟದಲ್ಲಿ ಸರಕಾರ ಭಾಗಿಯಾಗುತ್ತದೆ ಎಂದು ಭರವಸೆ ನೀಡಿದ್ದಾರೆ.
 
ಕೇಂದ್ರ ಸರಕಾರ ರೈತರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿದಲ್ಲಿ ಸಿಎಂ ಸಿದ್ದರಾಮಯ್ಯ ಸಹಕಾರಿ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಮನ್ನಾ ಮಾಡಲಿದ್ದಾರೆ ಎಂದು ಕಂದಾಯ ಖಾತೆ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಳ್ಳಾರಿ ಮಹಾನಗರಪಾಲಿಕೆಗೆ ಜಿ. ವೆಂಕಟರಮಣ ಮೇಯರ್