Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪುನೀತ್ ರಾಜ್ ಕುಮಾರ್ ಕನಸಿನ ಕೂಸು ಪಿ.ಆರ್.ಕೆ ಪ್ರೊಡಕ್ಷನ್ ಕಡಿಮೆ ಸಮಯದಲ್ಲೇ ಹತ್ತು ಚಿತ್ರಗಳನ್ನು ಪೂರೈಸಿದೆ. ಈ ಸಂಭ್ರಮಕ್ಕಾಗಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಹೊಸ ಸಿನಿಮಾವನ್ನು ಘೋಷಿಸಿದ್ದು, ಪಿ.ಆರ್.ಕೆ ಬ್ಯಾನರ್ನಲ್ಲಿ ಮೂಡಿ ಬರುತ್ತಿರುವ 10ನೇ ಚಿತ್ರಕ್ಕೆ ಆಚಾರ್ ಅಂಡ್ ಕೋ ಎಂದು ಹೆಸರಿಡಲಾಗಿದೆ. ಈ ಚಿತ್ರಕ್ಕೆ ಸಿಂಧು ಶ್ರೀನಿವಾಸ್ ಎಂಬ ನವ ನಿರ್ದೇಶಕಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕರ ಚೊಚ್ಚಲು ಸಿನಿಮಾ ಇದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಅಶ್ವಿನಿ ಪುನೀತ್ ರಾಜ್ ಕುಮಾರ್, ಆಚಾರ್ ಅಂಡ್ ಕೋ, ಪಿ.ಆರ್.ಕೆ ಪ್ರೊಡಕ್ಷನ್ನ 10ನೇ ಚಿತ್ರ. 60ನೇ ದಶಕದ ಬೆಂಗಳೂರನ್ನು ನಿಮ್ಮ ಮುಂದೆ ತರಲು ಒಂದು ಪ್ರಯತ್ನ. ಇದು ನಮ್ಮ ಸಂಸ್ಥೆಯಿಂದ ಮಹಿಳಾ ನಿರ್ದೇಶನದ ಮೊದಲ ಚಿತ್ರವಾಗಿದ್ದು, ಮುಂಚೂಣಿಯಲ್ಲಿ ಹಲವಾರು ಮಹಿಳೆಯರನ್ನು ಇದು ಒಳಗೊಂಡಿದೆ ಎಂದು ಟ್ವೀಟ್ ಮಾಡಿದ್ದಾರೆ.