Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ರಾಜ್ಯದಲ್ಲಿ 1151 ಕೊರೊನಾ ಸೋಂಕು ಪ್ರಕರಣಗ
ಳು ದೃಢಪಟ್ಟಿದ್ದು 10 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 270 ಸೋಂಕು ಪ್ರಕರಣಗಳು ವರದಿಯಾಗಿದ್ದರೆ ಇದೇ ಮೊದಲ ಬಾರಿ ಶೂನ್ಯ ಸಾವು ದಾಖಲಾಗಿದೆ.
ರಾಜ್ಯದಲ್ಲಿ ಒಂದೇ ದಿನ 1442 ಸೋಂಕಿತರು ಗುಣಮುಖಿತರಾಗಿದ್ದು, 20,255ಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ ಕುಸಿದಿದೆ.