Publish Date: Thu, 07 Apr 2022 (17:20 IST)
Updated Date: Thu, 07 Apr 2022 (17:26 IST)
12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ಮಗನನ್ನು (Son) ಬೆಂಕಿ ಹಚ್ಚಿ ಅಪ್ಪನೇ ಕೊಂದಿರುವ ಅಮಾನುಷ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಜಾದ್ ನಗರದಲ್ಲಿ ನಡೆದಿದೆ. ಕಳೆದ ವಾರ ಈ ಘಟನೆ ನಡೆದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಪಡೆಯುತ್ತಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಆಜಾದ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗನಿಗೆ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಕಿ ಹಚ್ಚಿ ಕೊಂದ ಅಪ್ಪನನ್ನು ಸುರೇಂದ್ರ ಎಂದು ಗುರುತಿಸಲಾಗಿದ್ದು, ಮಗನನ್ನು ಅರ್ಪಿತ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
geetha
Publish Date: Thu, 07 Apr 2022 (17:20 IST)
Updated Date: Thu, 07 Apr 2022 (17:26 IST)