Publish Date: Mon, 01 Jun 2020 (19:03 IST)
Updated Date: Mon, 01 Jun 2020 (19:04 IST)
ಕೊರೊನಾ ಸೋಂಕಿನಿಂದ ಗುಣಮುಖರಾದ 121 ಜನರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.
ಹೀಗಂತ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದ್ದು, ಇದು ಜಿಲ್ಲಾ ಆರೋಗ್ಯ ಇಲಾಖೆ ಸಿಬ್ಬಂದಿಗಳ ಆತ್ಮಸ್ಥೈರ್ಯ ಹೆಚ್ಚಿಸಿದೆ. ನಮ್ಮ ತಂಡದ ಪ್ರತಿಯೊಬ್ಬರೂ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದರಿಂದ ಸಾಧ್ಯವಾಯಿತು ಎಂದಿದ್ದಾರೆ.
ವೈದ್ಯರು, ಶುಶ್ರೂಷಕರು, ಸಹಾಯಕರು, ಆಸ್ಪತ್ರೆಯ ಸಿಬ್ಬಂದಿ, ಆಡಳಿತಗಾರರು, ಪೊಲೀಸರು ಎಲ್ಲರ ಸಹಕಾರದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳ ಕಾಣಲು ಸಾಧ್ಯವಾಗಿದೆ ಎಂದು ಜಿಲ್ಲಾಧಿಕಾರಿ ಪ್ರತಿಕ್ರಿಯಿಸಿದ್ದಾರೆ.
ಪ್ರಸ್ತುತ 31 ಸಕ್ರಿಯ ಪ್ರಕರಣಗಳಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.