Webdunia - Bharat's app for daily news and videos

Install App

ಏಪ್ರಿಲ್ 14 ತನಕ 144 ನಿಷೇಧಾಜ್ಞೆ ವಿಸ್ತರಣೆ

Webdunia
ಮಂಗಳವಾರ, 31 ಮಾರ್ಚ್ 2020 (21:07 IST)
ಕೊರೋನಾ ವೈರಸ್ ತಡೆಗಟ್ಟುವ ಮತ್ತು ಜನಸಂದಣಿ ನಿಯಂತ್ರಣದಲ್ಲಿಡಲು ಈಗಾಗಲೇ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ವಿಸ್ತರಣೆ ಮಾಡಲಾಗಿದೆ.

ಕಲಬುರಗಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ.ಆರ್.ಪಿ.ಸಿ. ಕಾಯ್ದೆ-1973ರ ಕಲಂ 144 ನಿಷೇಧಾಜ್ಞೆಯನ್ನು ಏಪ್ರಿಲ್ 14ರ ರಾತ್ರಿ 8 ಗಂಟೆ ವರೆಗೆ ವಿಸ್ತರಿಸಿ ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ಆದೇಶ ಹೊರಡಿಸಿದ್ದಾರೆ.

ಕೊರೋನಾ ಸೊಂಕಿನಿಂದ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯ ಹಿತದೃಷ್ಠಿಯಿಂದ ಏಪ್ರಿಲ್ 14ರ ವರೆಗೆ  ನಿಷೇಧಾಜ್ಞೆಯನ್ನು ವಿಸ್ತರಿಸಿದ್ದಾರೆ.

ನಿಷೇಧಾಜ್ಞೆಯ ಈ ಸಂದರ್ಭದಲ್ಲಿ ಸಾಮೂಹಿಕವಾಗಿ ಧಾರ್ಮಿಕ ಮತ್ತು ವೈಯಕ್ತಿಕ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಗುಂಪು-ಗುಂಪಾಗಿ ಚಲಿಸುವುದು ಮತ್ತು ಅನಾವಶ್ಯಕವಾಗಿ ಸಂಚರಿಸುವಂತಿಲ್ಲ. ಈ ಆದೇಶದಿಂದ ಭಯಪಟ್ಟು ಅಗತ್ಯಕ್ಕಿಂತ ಹೆಚ್ಚು ಅವಶ್ಯ ದಾಸ್ತಾನುಗಳನ್ನು ಖರೀದಿಸುವ ಅಗತ್ಯವಿಲ್ಲ ಎಂದು ಆದೇಶದಲ್ಲಿ ತಿಳಿಸಿದ್ದಾರೆ.  ಅಗತ್ಯ ಸೇವೆಗಳಿಗೆ ಈ ಆದೇಶ ಅನ್ವಯವಾಗುವುದಿಲ್ಲ ಎಂದು ಡಿ.ಸಿ. ಶರತ್ ಬಿ. ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments