Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಘರ್ಷಣೆಗೆ 15 ಕಾರು ಜಖಂ! ಸುರಪುರದಲ್ಲಿ ನಿಷೇಧಾಜ್ಞೆ ಜಾರಿ

ಘರ್ಷಣೆಗೆ 15 ಕಾರು ಜಖಂ!  ಸುರಪುರದಲ್ಲಿ ನಿಷೇಧಾಜ್ಞೆ ಜಾರಿ
ಯಾದಗಿರಿ , ಶುಕ್ರವಾರ, 7 ಏಪ್ರಿಲ್ 2023 (08:11 IST)
ಯಾದಗಿರಿ : ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆದ ಘಟನೆ ಸುರಪುರ ಬಿಜೆಪಿ ಶಾಸಕ ರಾಜುಗೌಡರ ಸ್ವಗ್ರಾಮ ಕೊಡೇಕಲ್ನಲ್ಲಿ ನಡೆದಿದೆ.
 
ಕಾಂಗ್ರೆಸ್ನ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ನೇತೃತ್ವದಲ್ಲಿ 40ಕ್ಕೂ ಹೆಚ್ಚು ಕಾರಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ನಾರಾಯಣಪೂರ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕೆ ಹೊರಟಿದ್ದರು. ಅದೇ ಮಾರ್ಗದಲ್ಲಿ ಕಾಲಜ್ಞಾನಿ ಕೊಡೇಕಲ್ ಬಸವಣ್ಣ ದೇವರ ಜಾತ್ರೆ ನಡೆಯುತ್ತಿತ್ತು. ಆಗ ಗದ್ದಲ ಏರ್ಪಟ್ಟಿದ್ದರಿಂದ ವೆಂಕಟಪ್ಪ ನಾಯಕರ ಬೆಂಬಲಿಗರು ಶಬ್ಧ ಮಾಡಿದ್ದಾರೆ. ಇದೇ ವಿಚಾರಕ್ಕೆ ಗಲಾಟೆ ಶುರುವಾಗಿ ಪರಸ್ಪರ ಕಲ್ಲು ತೂರಾಟ ನಡೆದಿದೆ. 

. ಆಗ ಕಾರುಗಳ ಮೇಲೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಪ್ರತಿಯಾಗಿ ಕಾಂಗ್ರೆಸ್ ಮುಖಂಡರು ಸಹ ಕಲ್ಲು ತೂರಾಡಿದ್ದಾರೆ. ಕಲ್ಲು ತೂರಾಟದಿಂದಾಗಿ ಕಾಂಗ್ರೆಸ್ ಮುಖಂಡರ 15 ಕಾರುಗಳು ಜಖಂಗೊಂಡಿವೆ. ಮಾರಕಾಸ್ತ್ರಗಳಿಂದ ಕೆಲವರು ಹಲ್ಲೆ ನಡೆಸಿದ್ದು ನಾಲ್ಕೈದು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಕೊಡೇಕಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ