Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

15 ಲಕ್ಷ ನೀಡಿ ಅಂತ ಸರಕಾರಕ್ಕೆ ಆಗ್ರಹಿಸಿದ ಸಂತ್ರಸ್ಥರು

15 ಲಕ್ಷ ನೀಡಿ ಅಂತ ಸರಕಾರಕ್ಕೆ ಆಗ್ರಹಿಸಿದ ಸಂತ್ರಸ್ಥರು
ಬೆಳಗಾವಿ , ಶುಕ್ರವಾರ, 20 ಸೆಪ್ಟಂಬರ್ 2019 (22:40 IST)
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಮನೆ ನಿರ್ಮಾಣಕ್ಕೆ ತಲಾ 15 ಲಕ್ಷ ರೂ.ಗಳನ್ನ ನೀಡಬೇಕೆಂದು ನೆರೆ ಸಂತ್ರಸ್ಥರು ಆಗ್ರಹ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸಚಿವ ಜಗದೀಶ್ ಶೆಟ್ಟರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ರೈತರು ಆಗ್ರಹ ಮಾಡಿದ್ರು.

ಸಂಪೂರ್ಣ ಸಾಲಮನ್ನಾ-ಒತ್ತಾಯ:

ರೈತ ಮುಖಂಡರಾದ ಚೂನಪ್ಪ ಪೂಜಾರಿ ಮಾತನಾಡಿ, ತಕ್ಷಣ ಬೆಳೆಪರಿಹಾರ ಬಿಡುಗಡೆಗೊಳಿಸಬೇಕು ಹಾಗೂ ಬೆಳೆಸಾಲ ಸೇರಿದಂತೆ ಎಲ್ಲ ಬಗೆಯ ಸಾಲಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.
ಕಬ್ಬು ಬೆಳೆಹಾನಿ 1.50 ಲಕ್ಷ ಹಾಗೂ ಉಳಿದ ಬೆಳೆಗೆ ಒಂದು ಲಕ್ಷ ಪರಿಹಾರ ನೀಡಬೇಕು. ಅದೇ ರೀತಿ ಜಾನುವಾರುಗಳಿಗೆ ಹೆಚ್ಚಿನ ಪರಿಹಾರ ನೀಡಬೇಕು. ಸಂಪೂರ್ಣ ಮುಳುಗಡೆಯಾಗಿರುವ ಗ್ರಾಮಗಳ ಶಾಶ್ವತ ಸ್ಥಳಾಂತರ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಮುಖಂಡರಾದ ಸಿದರಾಯ ಮೋದಗಿ ಮಾತನಾಡಿ, ಅವಿಭಕ್ತ ಕುಟುಂಬಗಳಿಗೆ ಸೂಕ್ತ ಪರಿಹಾರ ಸಿಗುತ್ತಿಲ್ಲ ಎಂದರು.
ಹೊಲದಲ್ಲಿ ಕಟ್ಟಿರುವ ಮನೆಗಳು ಪ್ರವಾಹದಿಂದ ನಾಶವಾಗಿದ್ದು, ಅವುಗಳಿಗೆ ಪರಿಹಾರ ನೀಡುತ್ತಿಲ್ಲ.
ಪ್ರವಾಹದಿಂದ ಹಾನಿ ಇಡೀ ಉತ್ತರ ಕರ್ನಾಟಕಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಬೇಕು. 

ಋಣಮುಕ್ತ ಪರಿಹಾರ ಕಾಯ್ದೆ ಅರ್ಜಿ ಸ್ವೀಕರಿಸುವ ಅವಧಿ ವಿಸ್ತರಿಸಬೇಕು. ಅಧಿವೇಶನದಲ್ಲಿ ವಿಶೇಷ ಚರ್ಚೆ ನಡೆಸಿ, ತಕ್ಷಣವೇ ವೈಜ್ಞಾನಿಕ ರೀತಿಯಲ್ಲಿ ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಪ್ರಕಾಶ್ ನಾಯಕ ಅವರು ಮಾತನಾಡಿ,  ಸಂತ್ರಸ್ತರ ಕಷ್ಟಗಳಿಗೆ ಸರ್ಕಾರ ಸೂಕ್ತವಾಗಿ ಸ್ಪಂದಿಸಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ ಪರಿಹಾರ ಕಾರ್ಯಕೈಗೊಳ್ಳಬೇಕು ಮತ್ತು ಪ್ರತಿ ರೈತ ಕುಟುಂಬಕ್ಕೆ ಒಂದು ಹಸು ಅಥವಾ ಎಮ್ಮೆ ನೀಡಿ ಹೈನುಗಾರಿಕೆಗೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. 
ಮನೆ ನಿರ್ಮಾಣಕ್ಕೆ ಕನಿಷ್ಠ ಹದಿನೈದು ಲಕ್ಷ ಪರಿಹಾರ ನೀಡಬೇಕು ಎಂದರು.

ಪ್ರವಾಹದಿಂದ ಹಾನಿಗೊಳಗಾಗಿರುವ ಜಮೀನುಗಳ ಸ್ವಚ್ಛತೆಗಾಗಿ ಆಯಾ ಕುಟುಂಬಗಳಿಗೆ ಮತ್ತು ಕೃಷಿ ಕಾರ್ಮಿಕರಿಗೂ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಒದಗಿಸಬೇಕು; ಸಂಪೂರ್ಣ ಸಾಲಮನ್ನಾ ಮಾಡಬೇಕು ಎಂದು ಕೆಲವು ಮುಖಂಡರು ಸಲಹೆ ನೀಡಿದರು. ಜಯಶ್ರೀ ಗುರನ್ನವರ  ಮಾತನಾಡಿದರು. 




Share this Story:

Follow Webdunia kannada

ಮುಂದಿನ ಸುದ್ದಿ

ಮನೆ ನಿರ್ಮಾಣ ಆರಂಭಿಸಲು ಸಾವಿರ ಕೋಟಿ ಬಿಡುಗಡೆ