ಭ್ರಷ್ಟ ಅಧಿಕಾರಿಗಳಾದ ಟಿ,ಎನ್.ಚಿಕ್ಕರಾಯಪ್ಪ, ಸಿ.ಎಸ್.ಜಯಚಂದ್ರ ಅವರನ್ನು ಸಸ್ಪೆಂಡ್ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಇಬ್ಬರು ಭ್ರಷ್ಟ ಅಧಿಕಾರಿಗಳಿಂದ ಕೋಟಿ ಕೋಟಿ ಹಣ, ಚಿನ್ನದ ಗಟ್ಟಿ, ಬೇನಾಮಿ ಆಸ್ತಿ ಸೇರಿದಂತೆ ಒಟ್ಟು 152 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಘೋಷಿಸಿದ್ದಾರೆ.
ವಿಧಾನಸಭೆ ಮತ್ತು ವಿಧಾನಪರಿಷತ್‌ನಲ್ಲಿ ವಿಪಕ್ಷಗಳು ರಾಜ್ಯ ಸರಕಾರವನ್ನು ತರಾಟೆಗೆ ತೆಗೆದುಕೊಂಡು ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುವುದು ಸರಿಯಲ್ಲ ಕೂಡಲೇ ಅವರನ್ನು ಅಮಾನತ್ತುಗೊಳಿಸಿ ಎಂದು ಒತ್ತಾಯಿಸಿದ್ದವು.
ವಿಪಕ್ಷಗಳ ಒತ್ತಡಕ್ಕೆ ಮಣಿದ ಸರಕಾರ, ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.