ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದಿನಿಂದ ಎರಡು ದಿನ ಹಾವೇರಿ, ಹುಬ್ಬಳ್ಳಿ ಪ್ರವಾಸ ಕೈಗೊಳ್ಳಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಇಂದು ಸಿಎಂ ಬೊಮ್ಮಾಯಿ ಹಾವೇರಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ.
ಸ್ವಕ್ಷೇತ್ರ ಶಿಗ್ಗಾಂವಿಯಲ್ಲಿ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸುತ್ತಾರೆ. ಬೆಳಗ್ಗೆ 10 ಗಂಟೆಗೆ ತಡಸ ಗ್ರಾಮಕ್ಕೆ ಭೇಟಿ ನೀಡಿ ರಸ್ತೆ ಕಾಮಗಾರಿ, ನೂತನ ಪ್ರವಾಸಿ ಮಂದಿರಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಶಿಗ್ಗಾಂವಿ ತಾಲೂಕಿನ ತಡಸದಲ್ಲಿ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ.
ಮಧ್ಯಾಹ್ನ 12 ಗಂಟೆಗೆ ಬಾಡ ಗ್ರಾಮದಲ್ಲಿ ಕಟ್ಟಡ ಉದ್ಘಾಟನೆ ಮಾಡುತ್ತಾರೆ. ಮಧ್ಯಾಹ್ನ 1ಕ್ಕೆ ಬಂಕಾಪುರದಲ್ಲಿ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುತ್ತಾರೆ. ಕಾರವಾರ-ಇಳಕಲ್ ರಸ್ತೆ ಕಾಮಗಾರಿಗೆ ಸಿಎಂ ಶಂಕುಸ್ಥಾಪನೆ ಮಾಡುತ್ತಾರೆ. ಬಳಿಕ ಶಾದಿ ಮಹಲ್ ಕಟ್ಟಡದ ಉದ್ಘಾಟನೆ ಮಾಡಲಿದ್ದಾರೆ.
ಸಂಜೆ 6.30ಕ್ಕೆ ಶಿಗ್ಗಾಂವಿ ಪಟ್ಟಣದಿಂದ ಹುಬ್ಬಳ್ಳಿಯತ್ತ ರಸ್ತೆ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ, 7. ರಾತ್ರಿ 8 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ಸ್ ಹೊಟೇಲ್ ನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಪುತ್ರಿಯ ವಿವಾಹ ಮುಹೂರ್ತ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.