Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಜೋರಾಗಿದೆ. ರಾಜ್ಯಾದ್ಯಂತ ಅಬ್ಬರಿಸುತ್ತಿದ್ದಾರೆ ಮಳೆರಾಯ. ಇನ್ನೂ 2 ದಿನ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರಿನಲ್ಲಿ ಇನ್ನೂ 2 ದಿನ ಆರೆಂಜ್ ಅಲರ್ಟ್ ಘೋಷಣ ಎಮಾಡಲಾಗಿದೆ..ಅಲ್ಲದೇ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಮೀನುಗಾರರು ಸಮದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ..ಇನ್ನು, ಬಳ್ಳಾರಿ, ಯಾದಗಿರಿ, ಬೀದರ್, ಕಲಬುರಗಿ, ರಾಯಚೂರು, ಕೊಪ್ಪಳ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ..
ಈಗಾಗಲೇ ಮಳೆಯಿಂದ ಸಾಕಷ್ಟು ಅವಾಂತರ ಸೃಷ್ಟಿಯಾಗಿದೆ. ಈ ಪರಿ ಮಳೆ ಹೊಯ್ಯುತ್ತಿದ್ದರೆ ಕುಡಿಯಲು, ದಿನ ನಿತ್ಯದ ಬಳಕೆಗೆ ನೀರು ಇಲ್ಲವಾಗಿರೋದ್ರಿಂದ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.