ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್`ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಹಲವು ತಂಡಗಳಲ್ಲಿ ತನಿಖೆ ನಡೆಯುತ್ತಿದ್ದು, ಇಬ್ಬರು ಶಂಕಿತರನ್ನ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
ಹೌದು, ಸಿಸಿಟಿವಿ ದೃಶ್ಯ ಆಧರಿಸಿ ಗೌರಿ ಲಂಕೇಶ್ ಹತ್ಯೆಯಾದ ಆಸುಪಾಸಿನಲ್ಲಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡಿದ್ದ ವ್ಯಕ್ತಿಗಳಿವರು ಎನ್ನಲಾಗಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇತ್ತೀಚೆಗಷ್ಟೇ ರಾಜರಾಜೇಶ್ವರಿ ನಗರದಲ್ಲಿ ತೀವ್ರ ಶೋಧ ಕೈಗೊಂಡಿದ್ದ ಎಸ್`ಐಟಿ ಅಧಿಕಾರಿಗಳು ಶಂಕಿತರು, ಅನುಮಾನಾಸ್ಪದ ವ್ಯಕ್ತಿಗಳ ಬಗ್ಗೆ ಮಾಹಿತಿ ಕೊಡುವಂತೆ ಕರ ಪತ್ರಗಳನ್ನ ಮುದ್ದರಿಸಿ ಮನೆ ಮನೆಗೆ ಹಂಚಿದ್ದರು.
ಹಂತಕರನ್ನ ಪತ್ತೆ ಮಾಡುವ ದೃಷ್ಟಿಯಿಂದ ವಿಶೇಷ ತನಿಖಾ ತಂಡ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ಅನುಮಾನ ಬಂದವರನ್ನೆಲ್ಲ ವಿಚಾರಣೆಗೆ ಒಳಪಡಿಸುತ್ತಿದೆ. ಗೌರಿ ಲಂಕೇಶ್ ತಮ್ಮ ಪತ್ರಿಕೆಯಲ್ಲಿ ಯಾರ್ಯಾರ ಮೇಲೆ ಲೇಖನ ಪ್ರಕಟಿಸಿದ್ದರೋ ಅವರನ್ನೂ ಅನುಮಾನದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ