ಕೊರೋನಾ ವೈರಸ್‌ನ ರೂಪಾಂತರ ತಳಿ ಒಮಿಕ್ರಾನ್ ವಿಶ್ವದೆಲ್ಲೆಡೆ ಹರಡಿದ್ದು, ಇದು 21 ಗಂಟೆಗಳ ಕಾಲ ಚರ್ಮದ ಮೇಲೆ ಹಾಗೂ ಎಂಟು ದಿನಗಳಿಗೂ ಹೆಚ್ಚು ಕಾಲ ಪ್ಲಾಸ್ಟಿಕ್ ಮೇಲೆ ಜೀವಂತವಾಗಿರಬಹುದು ಎಂದು ಅಧ್ಯಯನವೊಂದು ತಿಳಿಸಿದೆ.
ಇತರ ತಳಿಗಳಿಗೆ ಹೋಲಿಸಿದರೆ ಇದರ ಜೀವಿತಾವಧಿಯೂ ಹೆಚ್ಚು ಹಾಗೂ ವೇಗವಾಗಿ ಹರಡುವ ಸಾಮರ್ಥ್ಯವನ್ನೂ ಹೊಂದಿದೆ ಎಂದು ಜಪಾನ್‌ನ ಕ್ಯೋಟೊ ಪ್ರಿಫೆಕ್ಚರಲ್ ಯೂನಿವರ್ಸಿಟಿ ಆಫ್ ಮೆಡಿಸಿನ್‌ನ ಸಂಶೋಧಕರು ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ.
ವುಹಾನ್‌ನಲ್ಲಿ ಪತ್ತೆಯಾದ ವೈರಸ್‌ಗಿಂತ, ಆಲ್ಫಾ, ಬೀಟಾ, ಡೆಲ್ಟಾ ಮತ್ತು ಒಮಿಕ್ರಾನ್ ರೂಪಾಂತರ ತಳಿಗಳು ಪ್ಲಾಸ್ಟಿಕ್ ಹಾಗೂ ಚರ್ಮದ ಮೇಲೆ ಹೆಚ್ಚು ಕಾಲ ಬದುಕಬಲ್ಲವು ಎಂದು ಅಧ್ಯಯನ ತಿಳಿಸಿದೆ.