ಬೆಂಗಳೂರು : ರಾಜ್ಯದಲ್ಲಿ ಈ ಹಿಂದೆ ಕೋಮು ಗಲಭೆಯಿಂದ ಮೃತಪಟ್ಟವರ ಕುಟುಂಬಕ್ಕೆ ಸೋಮವಾರ ಸಿಎಂ ಸಿದ್ದರಾಮಯ್ಯ ತಲಾ 25 ಲಕ್ಷ ರೂ. ಪರಿಹಾರದ ಚೆಕ್ ವಿತರಣೆ ಮಾಡಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಕೋಮು ಗಲಭೆಯಲ್ಲಿ ಹತ್ಯೆಯಾದ ಮಸೂದ್, ಫಾಝಿಲ್, ಜಲೀಲ್, ಸಮೀರ್ ಹಾಗೂ ದೀಪಕ್ ರಾವ್ ಕುಟುಂಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಚೆಕ್ ವಿತರಣೆ ಮಾಡಿದರು. ಜೊತೆಗೆ ಕುಟುಂಬದ ತಲಾ ಒಬ್ಬರು ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿಯೂ ಭರವಸೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಬಿಜೆಪಿ ಸರ್ಕಾರ ಇದ್ದಾಗ ಕೋಮುಗಲಭೆಗಳಲ್ಲಿ ಮೃತಪಟ್ಟವರಿಗೆ 25 ಲಕ್ಷ ಪರಿಹಾರ ಕೊಟ್ಟಿದಾರೆ. ಆದ್ರೆ ಬಿಜೆಪಿಯವರು ಎಲ್ಲರಿಗೂ ಪರಿಹಾರ ಕೊಟ್ಟಿಲ್ಲ, ಹಿಂದೂಗಳಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಮುಸ್ಲಿಮರೂ ಕೋಮು ಗಲಭೆಗಳಲ್ಲಿ ಮೃತಪಟ್ಟಿದ್ದಾರೆ. ಸರ್ಕಾರ ಎಲ್ಲ ಧರ್ಮದವರನ್ನ ಸಮಾನವಾಗಿ ಕಾಣಬೇಕು ಎಂದು ಸಲಹೆ ನೀಡಿದರು.