ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಕಳೆಗಟ್ಟಿದ್ದರೆ ಆ ಗ್ರಾಮಗಳಲ್ಲಿ ಮಾತ್ರ ಕಡು ಕತ್ತಲೆ ಇತ್ತು.
ರಾಯಚೂರು ತಾಲೂಕಿನ 33 ಕೆವಿ ವಿದ್ಯುತ್ ಮಾರ್ಗ ಸ್ಥಗಿತಗೊಂಡ ಪರಿಣಾಮ ಸುಮಾರು 20 ಕ್ಕೂ ಹೆಚ್ಚು ಹಳ್ಳಿಗಳ ಜನರು ಕತ್ತಲೆಯಲ್ಲಿ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ವಿದ್ಯುತ್ ಮಾರ್ಗದ ನಿರ್ವಹಣೆಯಲ್ಲಿ ವ್ಯತ್ಯಾಸವಾಗಿದ್ದರಿಂದಾಗಿ ಹಬ್ಬದ ಸಂಭ್ರಮದಲ್ಲಿದ್ದ ಹಳ್ಳಿಗರು ರಾತ್ರಿ ಕತ್ತಲಲ್ಲೇ ಹಬ್ಬದ ಆಚರಣೆ ಮಾಡುವಂತಾಯಿತು.
ಜೆಸ್ಕಾಂ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಹಾಗೂ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.