ರಾಜ್ಯದಲ್ಲಿ ಪೂರೈಕೆಗಿಂತ ಹೆಚ್ಚು ವಿದ್ಯುತ್ ಬೇಡಿಕೆ ಸೃಷ್ಟಿಯಾಗಿರುವುದರಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ. ಹೀಗಾಗಿ ಉಷ್ಣ ವಿದ್ಯುತ್ ಉತ್ಪಾದನೆ ಹೆಚ್ಚಳಕ್ಕಾಗಿ ವಿದೇಶದಿಂದ ಕಲ್ಲಿದ್ದಲು ಆಮದು ಮಾಡಲು ನಿರ್ಧರಿಸಲಾಗಿದೆ. ವಿದೇಶಿ ಕಲ್ಲಿದ್ದಲು ದುಬಾರಿಯಾದರೂ ಖರೀದಿ ಮಾಡಲೇಬೇಕಾಗಿದೆ ಇನ್ನು ಮುಖ್ಯಮಂತ್ರಿಗಳ ಸೂಚನೆಯಂತೆ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆ ವಿದ್ಯುತ್ ಪೂರೈಸುವುದು,ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.