Publish Date: Tue, 26 May 2020 (18:14 IST)
Updated Date: Tue, 26 May 2020 (18:18 IST)
ಸರಕಾರವು ಸಾರಿಗೆ ನಿಗಮಗಳ ಸಿಬ್ಬಂದಿಗಳ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಕಳೆದ ಎರಡು ತಿಂಗಳಿನಿಂದ ಸಾರಿಗೆ ನಿಗಮಗಳಲ್ಲಿ ಯಾವುದೇ ಬಸ್ ಕಾರ್ಯಾಚರಣೆ ಆಗದೇ, ನಿಗಮದ ಆದಾಯ ಸಂಪೂರ್ಣ ಸ್ಥಗಿತಗೊಂಡು ವೇತನ ನೀಡಲು ಹಣವಿಲ್ಲದಂತಹ ಸ್ಥಿತಿಯಲ್ಲಿದ್ದ ಸಾರಿಗೆ ನಿಗಮಗಳಿಗೆ, ಇದೇ ಮೊದಲ ಬಾರಿಗೆ ಸಾರಿಗೆ ನಿಗಮಗಳ ಇತಿಹಾಸದಲ್ಲಿ ಸರಕಾರವು ವೇತನ ಬಿಡುಗಡೆ ಮಾಡಿದೆ. ಸಾರಿಗೆ ನಿಗಮಗಳ ಸಿಬ್ಬಂದಿಗಳ ವೇತನಕ್ಕೆ ಎಪ್ರಿಲ್ ತಿಂಗಳ ವೇತನಕ್ಕೆ 322 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಈ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಅಶೋಕ ಪಾಟೀಲ ಹಾಗೂ ಪ್ರಧಾನ ಕಾರ್ಯದರ್ಶಿ ಪಿ.ವೈ.ನಾಯಕ್ ಸನ್ಮಾನಿಸಿ, ಗೌರವಿಸಿದ್ದಾರೆ.