Daily Horoscope
✕

339 ಸರಕಾರಿ ಹುದ್ದೆಗಳಿಗೆ ಇಂದೇ ಅರ್ಜಿ ಸಲ್ಲಿಸಿ

Webdunia
ಗುರುವಾರ, 12 ಮಾರ್ಚ್ 2020 (14:25 IST)

ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
 

339 ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 16.03.2020 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದೆ. 15.04.2020ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿದ್ದು, ಕನಿಷ್ಟ 18 ರಿಂದ ಗರಿಷ್ಟ 32 ವರ್ಷದೊಳಗಿನ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ರ ಅಭ್ಯರ್ಥಿಗಳು, ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ದ್ವಿತೀಯ ಪಿಯುಸಿಯಲ್ಲಿಗಳಿಸಿದ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್‌ಸಿದ್ಧಪಡಿಸಿ, ಹುದ್ದೆಗಳಿಗೆ ಅನುಪಾತವಾರು 1:20 ಅನುಪಾತದಲ್ಲಿ ದೇಹದಾರ್ಢ್ಯತೆ, ದೈಹಿಕ ತಾಳ್ವಿಕೆ ಮತ್ತು ದೈಹಿಕ ಕಾರ್ಯ ಸಮರ್ಥತೆ, ಲಿಖಿತ ಪರೀಕ್ಷೆಗೆ ಹಾಜರಾಗಲು ಆಯ್ಕೆಪಟ್ಟಿ ಪ್ರಕಟಿಸಲಾಗುತ್ತದೆ. ನಂತರ ಈ ಎಲ್ಲಾ ಪರೀಕ್ಷೆಗಳಲ್ಲಿ ಪಾಸ್ ಆದ ಅಭ್ಯರ್ಥಿಗಳನ್ನು ಹುದ್ದೆಗಳ ಸಂಖ್ಯೆಗೆ ಅನುಗುಣವಾಗಿ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕರ್ನಾಟಕ ಅರಣ್ಯ ಇಲಾಖೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಆನ್‌ಲೈನ್‌ಮೂಲಕ ಅರ್ಜಿ ಸಲ್ಲಿಸಬಹುದು.

 

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಯಲ್ ರೂಂಗೆ ಎಳೆದೊಯ್ದು ಯುವತಿಯನ್ನು ಬರ್ಬರವಾಗಿ ಕೊಂದ ನೀಚ: ಸಿಸಿಟಿವಿಯಲ್ಲಿ ಶಾಕಿಂಗ್ ದೃಶ್ಯ Video

ಇಟೆಲಿ ನಾಯಕ ವೋಟ್ ಚೋರಿ ಎಂದು ವ್ಯಂಗ್ಯ ಮಾಡಿದರೆ ಚಪ್ಪಾಳೆ ತಟ್ಟಿ ನಕ್ಕ ರಾಹುಲ್: ಬಿಜೆಪಿ ಕೆಂಡ

ಸೋನಿಯಾ ಗಾಂಧಿ ಬುಕ್ ರಿಲೀಸ್ ಗೆ ಇಂದು ಈ ಎಲ್ಲಾ ನಾಯಕರ ಹಾಜರಿ

ಸೋನಿಯಾ ಪುಸ್ತಕ ಬಿಡುಗಡೆ ನೆಪ: ಡಿಕೆಶಿ, ಸಿದ್ದು, ಬಿಕೆ ಹರಿಪ್ರಸಾದ್ ದೆಹಲಿ ಭೇಟಿ ಹಿಂದಿದೆ ಈ ಕಾರಣ

ಮೈ ಜುಮ್ ಎನಿಸುವ ಘಟನೆ…ಪಂಬನ್ ಸೇತುವೆಯಲ್ಲಿ ಚಲಿಸುವ ರೈಲಿನಿಂದ ಜಿಗಿದ ಮಹಿಳೆ: ಮುಂದೇನಾಯ್ತು ನೋಡಿ video

ಮುಂದಿನ ಸುದ್ದಿ
Show comments