ಬೆಂಗಳೂರು: ಮೇ 12 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಅಭ್ಯರ್ಥಿಗಳ ಪೈಕಿ ಸಾಕಷ್ಟು ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್ ಇದೆ ಎನ್ನುವುದು ತಿಳಿದುಬಂದಿದೆ.
ಈ ಪೈಕಿ ಬಿಜೆಪಿ ಮುಂಚೂಣಿಯಲ್ಲಿದ್ದರೆ, ಕಾಂಗ್ರೆಸ್ ನಂತರದ ಸ್ಥಾನದಲ್ಲಿದೆ. ಬಿಜೆಪಿಯ 83 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್ ಇದೆ. ಕಾಂಗ್ರೆಸ್ ನ 52 ಅಭ್ಯರ್ಥಿಗಳು ಕ್ರಿಮಿನಲ್ ಹಿನ್ನಲೆಯುಳ್ಳವರಾಗಿದ್ದಾರೆ.
ಜೆಡಿಎಸ್ ಕೂಡಾ ಈ ಪಟ್ಟಿಯಲ್ಲಿ ಹಿಂದೆ ಬಿದ್ದಿಲ್ಲ. ಈ ಪಕ್ಷದ 41 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್ ಗಳಿವೆ. ಒಟ್ಟಾರೆಯಾಗಿ 2560 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅವರ ಪೈಕಿ 391 ಅಭ್ಯರ್ಥಿಗಳ ಮೇಲೆ ಕ್ರಿಮಿನಲ್ ಕೇಸ್ ಗಳಿವೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.