Webdunia - Bharat's app for daily news and videos

Install App

ನಂದಿನಿ ಮುಗಿಸಲು 3ನೇ ಸಂಚು - HDK

Webdunia
ಶನಿವಾರ, 8 ಏಪ್ರಿಲ್ 2023 (18:20 IST)
ಕನ್ನಡಿಗರ ಜೀವನಾಡಿ ನಂದಿನಿಯನ್ನು ಮುಗಿಸಲು ಈಗ 3ನೇಸಂಚು ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ H.D. ಕುಮಾರಸ್ವಾಮಿ ಸರಣಿ ಟ್ವೀಟ್​​ ಮೂಲಕ ಬಿಜೆಪಿ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಮುಲ್ ಜತೆ ನಂದಿನಿ ವಿಲೀನ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಮೊದಲನೇ ಸಂಚು, ಮೊಸರಿನ ಪ್ಯಾಕೆಟ್ ಮೇಲೆ ಹಿಂದಿಯ ದಹಿ ಪದ ಮುದ್ರಣ ಎರಡನೇ ಸಂಚು. ಆದರೆ, ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಯಿತು. ಇದೀಗ 3ನೇ ಸಂಚು ಸಫಲಗೊಳಿಸಲು ಅಮುಲ್​​​ ಮೂಲಕ ಕೇಂದ್ರ ಸರ್ಕಾರ ಹೊರಟಿದೆ. ಹಿಂಬಾಗಿಲ ಮೂಲಕ ಒಳ ನುಗ್ಗುತ್ತಿದೆ.. ತನ್ನ ಏಕೈಕ ಪ್ರತಿ ಸ್ಪರ್ಧಿ ನಂದಿನಿಗೆ ಕರ್ನಾಟಕದಲ್ಲೇ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್ ಎನ್ನುವುದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​​ಗೆ ಒತ್ತಾಸೆಯಾಗಿ ನಿಂತು KMF ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ. ಆಪೋಶನ ತೆಗೆದುಕೊಳ್ಳುವುದು ಖಚಿತ ಹೈನುಗಾರಿಕೆಯ ಮೂಲ ಉತ್ಪನ್ನ ಹಾಲನ್ನು ತನ್ನ ಬ್ರ್ಯಾಂಡ್​ನಲ್ಲಿಯೇ ಕರ್ನಾಟಕದಲ್ಲಿಯೇ ಮಾರಲು ಹೊರಟಿರುವ ಅಮುಲ್, ನಂದಿನಿಯನ್ನು ಆಪೋಶನ ತೆಗೆದುಕೊಳ್ಳುವುದು ಖಚಿತ ಎಂದು HDK ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments