ಚಾಮರಾಜನಗರ : ಸುಳ್ವಾಡಿ ಕಿಚ್ಚುಗುತ್ತಿ ಮಾರಮ್ಮ ದೇವಸ್ಥಾನದ ವಿಷ ಪ್ರಸಾದ ದುರಂತಕ್ಕೆ ಸಂಬಂಧಿಸಿದಂತೆ ವಿಷ ಹಾಕಿದ ನಾಲ್ವರು ಆರೋಪಿಗಳನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮೀಜಿ, ಸೂಚನೆಯಂತೆ ವಿಷ ಹಾಕಿದ್ದೆ ಎಂದು ವ್ಯವಸ್ಥಾಪಕ ಮಾದೇಶ್ ಪತ್ನಿ ಅಂಬಿಕಾ ತಪ್ಪೊಪ್ಪಿಕೊಂಡ ಹಿನ್ನಲೆಯಲ್ಲಿ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮೀಜಿ, ವ್ಯವಸ್ಥಾಪಕ ಮಾದೇಶ್, ಮಾದೇಶನ ಪತ್ನಿ ಅಂಬಿಕಾ, ನಾಗದೇವತೆ ದೇವಾಲಯದ ಅರ್ಚಕ ದೊಡ್ಡಯ್ಯ ರನ್ನು ರಾಮಪುರ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.
ಇದೀಗ ವಿಷ ಪ್ರಸಾದ ದುರಂತದ ಪ್ರಮುಖ ಆರೋಪಿಗಳಾದ ಟ್ರಸ್ಟ್ ಅಧ್ಯಕ್ಷ ಇಮ್ಮಡಿ ಮಹದೇವಸ್ವಾಮೀಜಿ, ವ್ಯವಸ್ಥಾಪಕ ಮಾದೇಶ್, ಮಾದೇಶನ ಪತ್ನಿ ಅಂಬಿಕಾ, ನಾಗದೇವತೆ ದೇವಾಲಯದ ಅರ್ಚಕ ದೊಡ್ಡಯ್ಯ ರನ್ನು ಬಂಧಿಸಿದ ಪೊಲೀಸರು ಇಂದು ಸಂಜೆಯೊಳಗೆ ಕೊಳ್ಳೆಗಾಲದ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.