Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಿಕ್ಕಮಗಳೂರು : ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಾ ಹೋಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸೋಂಕು ಹೆಚ್ಚಾಗಿ ಪತ್ತೆಯಾಗುತ್ತಿದೆ.
ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ಇದರ ನಡುವೆ ಒಮಿಕ್ರಾನ್ ಕರ್ನಾಟಕಕ್ಕೆ ಕಾಲಿಟ್ಟಿರುವುದು ಆತಂಕ ದುಪ್ಪಟ್ಟಾಗಿದೆ. ಕರ್ನಾಟಕದಲ್ಲಿ ಎರಡು ಒಮಿಕ್ರಾನ್ ಕೇಸ್ ದಾಖಲಾಗಿದ್ದು ದೇಶದಲ್ಲಿ ನಿನ್ನೆ ಮತ್ತೆರಡು ಕೇಸ್ ಪತ್ತೆಯಾಗಿವೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಸಿಗೋಡು ಗ್ರಾಮದ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟಗೊಂಡಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ಈಗ ಜವಾಹರ್ ನವೋದಯ ವಿದ್ಯಾಲಯ ಸೀಲ್‌ಡೌನ್ ಮಾಡಲಾಗಿದೆ.