Publish Date: Wed, 05 Jul 2023 (15:56 IST)
Updated Date: Wed, 05 Jul 2023 (14:58 IST)
ರಾಜ್ಯದ ಮೇಲೆ ವರುಣನ ಮುನಿಸು ಕಡಿಮೆಯಾದಂತೆ ಕಾಣುತ್ತಿದ್ದು, ರಾಜ್ಯದಲ್ಲಿ ಮುಂಗಾರು ಬಿರುಸಾಗಿದೆ.ಇಂದಿನಿಂದ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಬಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಕರಾವಳಿಗೆ ರೆಡ್ ಅಲರ್ಟ್, ದಕ್ಷಿಣ ಒಳನಾಡಿಗೆ ಆರೆಂಜ್ ಅಲರ್ಟ್, ಉತ್ತರ ಒಳನಾಡಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿಯಲ್ಲಿ 115 ಮಿ.ಮೀ ನಿಂದ 204 ಮಿ.ಮೀ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತಗ್ಗು ಪ್ರದೇಶದಲ್ಲಿರುವ ನಿವಾಸಿಗಳು, ಸಮುದ್ರದ ಬಳಿ ಇರುವವರು ಎಚ್ಚರದಿಂದಿರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.