Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಮಕ್ಕಳ ಕುಟುಂಬಗಳಿಗೆ 5 ಲಕ್ಷ ಪರಿಹಾರ: ಡಿಸಿಎಂ ಶಿವಕುಮಾರ್‌

DCM DK Shivkumar, Bengaluru Rain Effect, BBMP

Sampriya

ಬೆಂಗಳೂರು , ಬುಧವಾರ, 23 ಅಕ್ಟೋಬರ್ 2024 (20:14 IST)
ಬೆಂಗಳೂರು: ಕೆಂಗೇರಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ಬಿಬಿಎಂಪಿ ವತಿಯಿಂದ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್‌ ತಿಳಿಸಿದರು.  

ಮನೆಗೆ ನೀರು ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ, ವಸತಿ ಇಲ್ಲದವರಿಗೆ ವಾಸಿಸಲು ತಾತ್ಕಾಲಿಕ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಇದರ ಜತೆಗೆ ನಗರದಾದ್ಯಂತ ಮುಲಾಜಿಲ್ಲದೆ ರಾಜಕಾಲುವೆ ಒತ್ತುವರಿ ತೆರವಿಗೆ ಸೂಚನೆ ನೀಡಲಾಗಿದ್ದು, ಮಳೆ ನೀರುಗಾಲುವೆಗಳನ್ನು ಸ್ವಚ್ಛಗೊಳಿಸಿ ಸರಾಗವಾಗಿ ನೀರು ಹರಿಯುವಂತೆ ಮಾಡಲು ವಿಶ್ವಬ್ಯಾಂಕಿನಿಂದ 1 ಸಾವಿರ ಕೋಟಿ ಸಾಲ ಪಡೆದು ಈಗಾಗಲೇ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.

ಮಳೆಯಿಂದ ಸಮಸ್ಯೆಗೆ ಒಳಗಾಗಿರುವ ಯಲಹಂಕದ ಕೇಂದ್ರೀಯ ವಿಹಾರ ವಸತಿ ಸಮುಚ್ಚಯ, ಬ್ಯಾಟರಾಯನಪುರದ ಮರಿಯಣ್ಣಪಾಳ್ಯ, ಕೆ.ಆರ್. ಪುರಂನ ಹೊರಮಾವಿನ ಶ್ರೀ ಸಾಯಿ ಬಡಾವಣೆಗೆ ಶಿವಕುಮಾರ್ ಅವರು ಪಾಲಿಕೆ ಅಧಿಕಾರಿಗಳ ತಂಡದೊಂದಿಗೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ನೀರು ನುಗ್ಗಿದ ಕೇಂದ್ರೀಯ ವಿಹಾರಗೆ ಶಿವಕುಮಾರ್ ಭೇಟಿ, ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟ ಡಿಸಿಎಂ