ಕಳೆದ ಎರಡ್ಮೂರು ದಿನಗಳಿಂದ ಬೆಂಗಳೂರಿನಲ್ಲಿ ಸುರಿಯುತ್ತಿರುವ ಮಳೆಯ ಅವಾಂತರ ಅಷ್ಟಿಷ್ಟಲ್ಲ. ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತವಾಗಿವೆ. ಈ ಮಧ್ಯೆ ಈಜಿಪುರದಲ್ಲಿ 5 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ವಾಲುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.
ಮುಂಜಾಗ್ರತಾ ಕ್ರಮವಾಗಿ ಅಕ್ಕಪಕ್ಕದ ಮನೆಗಳ ಜನರನ್ನ ತೆರವುಗೊಳಿಸಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹಂತ ಹಂತವಾಗಿ ಕಟ್ಟಡವನ್ನ ಉರುಳಿಸುವ ಕೆಲಸ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿದೆ. ಆದರೆ, ಭಾರೀ ಮಳೆಯಿಂದಾಗಿ ಈ ಕಟ್ಟಡ ನೆನೆದು ವಾಲುತ್ತಿದೆಯೋ ಅಥವಾ ಕಳಪೆ ಕಾಮಗಾರಿಯಿಂದಲೋ ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
ಸ್ಥಳಕ್ಕೆ ಭೇಟಿ ನೀಡಿದ ಬಿಬಿಎಂಪಿ ಇಂಜಿನಿಯರ್, 20X40ರ ಕಟ್ಟಡದಲ್ಲಿ ಒಂದು ಮಹಡಿ ಮಾತ್ರ ಕಟ್ಟಲು ಅವಕಾಶವಿದೆ. ಆದರೆ, 5 ಕಟ್ಟಡ ಕಟ್ಟಲಾಗಿದೆ ಎಂಬ ಮಾಹಿತಿ ಸಿಕ್ಕಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈಗಾಗಲೇ ರಕ್ಷಣಾ ತಂಡ ಸಹ ಸ್ಥಳದಲ್ಲಿ ಬೀಡುಬಿಟ್ಟಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ