ಬೆಂಗಳೂರು: ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಘಟನೆ ಬೆಂಗೂರಿನಲ್ಲಿ ನಡೆದಿದೆ. 5 ವರ್ಷದ ಬಾಲಕಿಯನ್ನು ಅಪಹರಿಸಿ ದುರುಳರು ಗ್ಯಾಂಗ್ ರೇಪ್ ಎಸಗಿರುವ ಘಟನೆ ನಡೆದಿದೆ.
ವೈಯಾಲಿಕಾವಲ್ ಸೊಸೈಟಿ ಬಳಿಯಲ್ಲಿ ಈ ಘಟನೆ ನಡೆದಿದೆ. ಆಟವಾಡುತ್ತಿದ್ದ ಬಾಲಕಿಯನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದ ಕಿರಾತಕರು ಅತ್ಯಾಚಾರವೆಸಗಿದ್ದಾರೆ. ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಬಾಲಕಿಯನ್ನು ಸದ್ಯಕ್ಕೆ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆ.ಜಿ. ಹಳ್ಳಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಸ್ಥಳದಲ್ಲಿ ಸಿಸಿಟಿವಿ ಕ್ಯಾಮರಾ ಅಥವಾ ಇನ್ಯಾವುದೇ ಸುಳಿವು ಇರದ ಕಾರಣ ಪೊಲೀಸರಿಗೆ ಆರೋಪಿಗಳ ಪತ್ತೆ ಮಾಡುವುದು ಕಷ್ಟವಾಗಿದೆ.