Webdunia - Bharat's app for daily news and videos

Install App

ಇಡ್ಲಿ ಕೊಡಿಸುವುದಾಗಿ ಹೇಳಿ 5 ವರ್ಷದ ಬಾಲಕಿಯನ್ನು ರೇಪ್ ಮಾಡಿದ ವಿವಾಹಿತ

Webdunia
ಮಂಗಳವಾರ, 3 ಡಿಸೆಂಬರ್ 2019 (06:52 IST)
ಚಾಮರಾಜನಗರ : ವಿವಾಹಿತ ವ್ಯಕ್ತಿಯೊಬ್ಬ ಮನೆಯಲ್ಲಿ ಆಟವಾಡುತ್ತಿದ್ದ 5 ವರ್ಷದ ಬಾಲಕಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಘಟನೆ ಚಾಮರಾಜನಗರದ ಹನೂರು ತಾಲೂಕಿನಲ್ಲಿ ನಡೆದಿದೆ.



ಬಸವರಾಜು(35) ಅತ್ಯಾಚಾರ ಎಸಗಿದ ಆರೋಪಿ. ಸೋಮವಾರ ಬೆಳಿಗ್ಗೆ ಮಗು ಮನೆಯ ಹೊರಗೆ ಆಟವಾಡುತ್ತಿದ್ದಾಗ ಅಲ್ಲಿಗೆ ಬಂದ ಈತ ಮಗುವಿಗೆ ಇಡ್ಲಿ ಕೊಡಿಸುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಬಳಿಕ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ.


ಮನೆಗೆ ಬಂದ ಬಾಲಕಿ ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೋಷಕರು ವಿಚಾರಿಸಿದಾಗ ಬಾಲಕಿ ನಡೆದ ವಿಚಾರವನ್ನು ತಿಳಿಸಿದ್ದಾಳೆ. ತಕ್ಷಣ ಪೋಷಕರು ರಾಮಾಪುರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments