Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಗರ್ಭಿಣಿ, ಬಾಣಂತಿಯರಿಗೆ ಶೇ.50 ರಿಯಾಯಿತಿ

ಗರ್ಭಿಣಿ, ಬಾಣಂತಿಯರಿಗೆ ಶೇ.50 ರಿಯಾಯಿತಿ
bangalore , ಮಂಗಳವಾರ, 20 ಡಿಸೆಂಬರ್ 2022 (16:36 IST)
ಬೆಂಗಳೂರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಅಡಿಯಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ ರಾಜ್‌ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ಯೋಜನೆಯಡಿ ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ದಿನಕ್ಕೆ ನಿಗದಿತ ಕೂಲಿ ಪಡೆಯಲು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿಯನ್ನು ರಾಜ್ಯ ಸರ್ಕಾರ ನೀಡಿದೆ. ಅಷ್ಟೇ ಅಲ್ಲ, ಸದ್ಯ ಮಹಿಳೆಯರ ಭಾಗವಹಿಸುವಿಕೆ ಶೇ.51ರಷ್ಟಿದ್ದು, ಇದನ್ನು ಶೇ.60 ಕ್ಕೆ ಹೆಚ್ಚಿಸುವ ಗುರಿ ಇದೆ. ಶೇ.60 ಕ್ಕಿಂತ ಹೆಚ್ಚಿನ ಪ್ರಮಾಣದ ಮಹಿಳೆಯರನ್ನು ಹೊಂದಿರುವ ಕಾಮಗಾರಿಗಳಲ್ಲಿ ಮಹಿಳೆಯರು ನಿರ್ವಹಿಸಬೇಕಾದ ಕೆಲಸದ ಪ್ರಮಾಣದಲ್ಲಿ ಶೇ.10 ರಷ್ಟು ರಿಯಾಯಿತಿ ನೀಡಲಾಗಿದೆ. ನರೇಗಾ ಕಾಮಗಾರಿಗಳಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ಅವರ ದೈಹಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೆಲಸದ ಪ್ರಮಾಣದಲ್ಲಿ ರಿಯಾಯಿತಿ ನೀಡುವುದು ಅವಶ್ಯಕವಾಗಿದೆ‌. ಈ ಹಿನ್ನೆಲೆಯಲ್ಲಿ ಕೆಲಸ ನಿರ್ವಹಿಸುವ 6 ತಿಂಗಳು ತುಂಬಿದ ಗರ್ಭಿಣಿಯರಿಗೆ ಮಗುವಿನ ಜನನದವರೆಗೆ ಹಾಗೂ ಬಾಣಂತಿಯರಿಗೆ ಮಗುವಿನ ಜನನ ದಿನಾಂಕದಿಂದ 6 ತಿಂಗಳವರೆಗೆ ನಿಗದಿತ ಕೂಲಿ ಪಡೆಯಲು ನಿಗದಿಪಡಿಸಲಾದ ಕೆಲಸದ ಪ್ರಮಾಣದಲ್ಲಿ ಶೇ.50 ರಷ್ಟು ರಿಯಾಯಿತಿ ಸಿಕ್ಕಿದೆ. ಈ ರಿಯಾಯಿತಿ ನೀಡಲು ಆರೋಗ್ಯ ಇಲಾಖೆ ನೀಡುವ ತಾಯಿ ಕಾರ್ಡ್​ ಆಧಾರವಾಗಿ ಪರಿಗಣಿಸಲು ತಿಳಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಎರಡು ವಾರದ ನವಜಾತ ಶಿಶು ಪತ್ತೆ