Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು.ಅ.30;ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರದ ವೇಳೆ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶವಾಗದಂತೆ ರಾಜ್ಯ ಸರ್ಕಾರ ಬೆಂಗಳೂರು ನಗರಾದ್ಯಂತ ಹೆಚ್ಚುವರಿ ವಿದ್ಯಾರ್ಥಿಗಳು ಮತ್ತು ಕೆಎಸ್ಆರ್ಪಿ ತುಕಡಿ ನಿಯೋಜನೆ ಮಾಡಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ಕಂಠೀರವ ಸ್ಟುಡಿಯೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಗೋಪಾಲಯ್ಯ ಮತ್ತು ಸ್ಥಳಿಯ ಕಾರ್ಪೊರೇಟರ್ಗಳ ಜೊತೆಯಲ್ಲಿ ನಿಂತು ಕಾರ್ಯಕ್ರಮವನ್ನು ನೆರವೇರಿಸಿದರು. ಎಲ್ಲವೂ ಸುಗಮವಾಗಿ ನಡೆಯಲಿ ಎಂಬ ದೃಷ್ಟಿಯಿಂದ ಸರ್ಕಾರ ವಿಶೇಷ ಗಮನ ನೀಡಿದೆ. ಬೆಂಗಳೂರಿನಲ್ಲಿ 20 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಇದು 150 ಪೊಲೀಸರನ್ನು ಬೇರೆ ಬೇರೆ ಜಿಲ್ಲೆಗಳಿಂದ ಕರೆಯಲಾಗಿದೆ.2 ಕೇಂದ್ರೀಯ ಮೀಸಲು ಪೊಲೀಸ್ ಪಡೆ, 50 ತುಕಡಿ ಕೆಎಸ್ಆರ್ಪಿಯನ್ನು ಭದ್ರತೆಗೆ ನೀಡಲಾಗಿದೆ.
ಎಂಥಹುದೇ ಅಹಿತರಕರ ಘಟನೆಯನ್ನು ನಿಭಾಯಿಸಲು ಪೊಲೀಸರು ಮತ್ತು ಅಧಿಕಾರಿಗಳು ಸಿದ್ದರಾಗಿದ್ದಾರೆ. ಎಷ್ಟು ಪೊಲೀಸರನ್ನು ನೇಮಿಸಿದರು ಕೂಡ ಸಾರ್ವಜನಿಕರು ಎಲ್ಲೆಲ್ಲಿ ಗೌರವದಿಂದ ನಡೆದುಕೊಳ್ಳಬೇಕಾಗಿದೆ. ದೃಶ್ಯ ಮಾಧ್ಯಮಗಳ ಮೂಲಕ ಮನೆಯಲ್ಲಿ ಕುಳಿತು ನೋಡಬಹುದು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಕೆ.ಗೋಪಾಲಯ್ಯ.