Publish Date: Mon, 23 Dec 2019 (11:27 IST)
Updated Date: Mon, 23 Dec 2019 (11:32 IST)
ಯಾದಗಿರಿ: ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬೆಂಚಿಗಡ್ಡಿ ಗ್ರಾಮದ ಗವಿರಂಗ ಹನುಮಾನ ದೇವಸ್ಥಾನದ ಜಾವಳ ಕಾರ್ಯಕ್ರಮದಲ್ಲಿ ಆಹಾರ ಸೇವಿಸಿ 50 ಮಂದಿ ಅಸ್ವಸ್ಥರಾದ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ.
ಭಾನುವಾರದಂದು ಈ ಕಾರ್ಯಕ್ರಮ ನಡೆದಿದ್ದು, ಕಾರ್ಯಕ್ರಮಕ್ಕೆ ಬಂದವರಿಗೆ ಹೋಳಿಗೆ, ಅನ್ನ ಸಾಂಬರ್ ನೀಡಲಾಗಿತ್ತು. ಊಟ ಮಾಡಿದವರ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಆಸ್ಪತ್ರೆಗೆ ಪೊಲೀಸರು ಭೇಟಿ ನೀಡಿ ಘಟನೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ.