ಚಿರತೆ ದಾಳಿಗೆ ಬಲಿಯಾದ ಮಹಿಳೆ ಕುಟುಂಬಕ್ಕೆ ಸರಕಾರದಿಂದ 7.50 ಲಕ್ಷ ರೂ. ಪರಿಹಾರವನ್ನು ಸಚಿವರು ನೀಡಿದ್ದಾರೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಸೋಲೂರು ಹೋಬಳಿಯ ಕೊಟ್ಟಗಾಣಹಳ್ಳಿಯ 62 ವರ್ಷದ ಮಹಿಳೆ ಚಿರತೆ ದಾಳಿಗೆ ಸಾವನ್ನಪ್ಪಿದ್ದರು.
ಹೀಗಾಗಿ ಸಚಿವ ಡಾ. ಅಶ್ವಥ್ ನಾರಾಯಣ ಅವರು ಮೃತರ ಮನೆಗೆ ಭೇಟಿ ನೀಡಿ, ಸರ್ಕಾರದಿಂದ ಮಂಜೂರು ಮಾಡಿರುವ 7.5 ಲಕ್ಷ ರೂ.ಗಳ ಪರಿಹಾರ ಮಂಜೂರಾತಿ ಪತ್ರ ನೀಡಿದರು.
ಮಂಜೂರಾತಿ ಪತ್ರವನ್ನು ಮೃತರಾದ ಗಂಗಮ್ಮ ಅವರ ಸೊಸೆ ಲಕ್ಷಮ್ಮ ಹಾಗೂ ಮಮ್ಮಗ ರವಿಶಂಕರ್ ಅವರಿಗೆ ಹಸ್ತಾಂತರಿಸಿದ ನಂತರ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು.
ನಂತರ ಚಿರತೆ ದಾಳಿ ನಡೆಸಿದ ಸ್ಥಳವನ್ನು ಪರಿಶೀಲಿಸಿ ಚಿರತೆಗಳು ಮನುಷ್ಯನ ಮೇಲೆ ದಾಳಿ ನಡೆಸುವುದು ಅಪರೂಪ. ಇದು ವಿಶೇಷ ಪ್ರಕರಣವಾಗಿದ್ದು ದಾಳಿ ನಡೆಸಿದ ಚಿರತೆಯನ್ನು ಸೆರೆ ಹಿಡಿಯಬೇಕಿದೆ ಎಂದರು.