Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಹಿಸ್ಸಾ ನಕಾಶೆ, ತತ್ಕಾಲ್ ಪೋಡಿ, ಭೂ ಪರಿವರ್ತನೇ ಕೆಲಸಕ್ಕೆ ಸರ್ಕಾರಿ ಕಚೇರಿ ಅಳಿಯುವಂತಿಲ್ಲ

ಹಿಸ್ಸಾ ನಕಾಶೆ, ತತ್ಕಾಲ್ ಪೋಡಿ, ಭೂ ಪರಿವರ್ತನೇ ಕೆಲಸಕ್ಕೆ ಸರ್ಕಾರಿ ಕಚೇರಿ ಅಳಿಯುವಂತಿಲ್ಲ
ಬೆಂಗಳೂರು , ಭಾನುವಾರ, 11 ಸೆಪ್ಟಂಬರ್ 2022 (16:11 IST)
ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆಗಾಗಿ ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಅಲೆದು ಚಪ್ಪಲಿ ಸವೆಸುವ ಜಂಜಾಟ ಇನ್ನು ತಪ್ಪಲಿದೆ!
 
ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯಿಂದ ಸಾರ್ವಜನಿಕರಿಗೆ ವಿಳಂಬವಿಲ್ಲದೆ ಸೇವೆ ಕಲ್ಪಿಸುವುದಕ್ಕೆ 'ಸ್ವಾವಲಂಬಿ' ವೆಬ್​ಸೈಟ್ ವರದಾನವಾಗಿದೆ.
ಈ ವೆಬ್​ಸೈಟ್ ಮೂಲಕವೇ ಭೂಮಿಯ ಮಾಲೀಕರು ಜಮೀನಿನ 11ಇ (ಹಿಸ್ಸಾ ನಕಾಶೆ), ತತ್ಕಾಲ್ ಪೋಡಿ, ಭೂ ಪರಿವರ್ತನಾ ನಕ್ಷೆ ಇತ್ಯಾದಿ ಪಡೆಯಲು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಏಳೇ ದಿನದಲ್ಲಿ ದಾಖಲೆಗಳು ಕೈ ಸೇರಲಿವೆ. ಈ ವೆಬ್​ಸೈಟ್ ಆರಂಭವಾದಾಗಿನಿಂದ ರಾಜ್ಯಾದ್ಯಂತ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿದ್ದು, ಶೇ. 70ಕ್ಕಿಂತ ಹೆಚ್ಚು ವಿಲೇವಾರಿಯಾಗಿವೆ. ಈ ಮೊದಲು ನಾಡ ಕಚೇರಿಗೆ ಹೋಗಿ ಜಮೀನಿನ 11ಇ, ಪೋಡಿ ಸೇರಿ ಇತ್ಯಾದಿ ಕಾರ್ಯಗಳಿಗೆ ಅರ್ಜಿ ಸಲ್ಲಿಸಬೇಕಾಗಿತ್ತು. ಆ ಅರ್ಜಿಯು ನಾಡಕಚೇರಿಯಲ್ಲಿ ಪರಿಶೀಲನೆಗೊಳಪಟ್ಟು ಸರತಿಯಲ್ಲಿ ಬೀಳುತಿತ್ತು. ಸರತಿಯಿಂದ ಭೂಮಾಪಕರ ಬಳಿ ಹೋಗುತ್ತಿತ್ತು. ಭೂಮಾಪಕರು ಜಮೀನನ್ನು ಪರಿಶೀಲಿಸಿ, ನಕ್ಷೆ ಗುರುತಿಸಿ ಅಪ್​ಲೋಡ್ ಮಾಡುತ್ತಿದ್ದರು. ಅಪ್​ಲೋಡ್ ಆದ ದಾಖಲೆಯನ್ನು ತಪಾಸಕರ ಮೂಲಕ ಪರಿಶೀಲಿಸಿದ ಬಳಿಕ ಅಂತಿಮ ಅನುಮೋದನೆಗೆ ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಗೆ ಕಳುಹಿಸಲಾಗುತ್ತಿತ್ತು. ಈ ಎಲ್ಲ ಪ್ರಕ್ರಿಯೆಗೆ ಕನಿಷ್ಠ ಒಂದೂವರೆ ತಿಂಗಳಿಂದ ಎರಡು ತಿಂಗಳು ಸಮಯ ಹಿಡಿಯುತ್ತಿತ್ತು. ಆದರೆ, 'ಸ್ವಾವಲಂಬಿ' ವೆಬ್​ಸೈಟ್ ಮೂಲಕ ಸಲ್ಲಿಕೆಯಾಗುವ ಅರ್ಜಿಗಳನ್ನು 7 ದಿನಗಳಲ್ಲಿ ವಿಲೇವಾರಿ ಮಾಡಲಾಗುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಖತ್ ಹಾಟ್ ಆಗಿರುವ ಆಶಿಕಾ ರಂಗನಾಥ್