ಬೆಳಗಾವಿ : ಯುವಕನೊಬ್ಬ 7 ವರ್ಷದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಘಟನೆ ಗೋಕಾಕ್ ನಗರದ ಗಲ್ಲಿಯೊಂದರಲ್ಲಿ ಮಂಗಳವಾರ (ನಿನ್ನೆ)ಸಂಜೆ ನಡೆದಿದೆ.
ಆರೋಪಿ ನಗರದ ಗಲ್ಲಿಯೊಂದರ ನಿವಾಸಿ ಬಸವರಾಜ ಲಕ್ಷ್ಮಣ್ ಬೋಸಲೆ (25) ಎಂಬುದಾಗಿ ತಿಳಿದುಬಂದಿದ್ದು, ಇತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪರಾರಿಯಾದ ಒಂದು ಗಂಟೆಯೊಳಗೆ ಪೊಲೀಸರು ಇತನನ್ನು ಬಂಧಿಸಿರುವುದಾಗಿ ತಿಳಿದುಬಂದಿದೆ.
ಘಟನೆ ಖಂಡಿಸಿ ಬಾಲಕಿಯ ಪೋಷಕರು ಹಾಗೂ ಸ್ಥಳೀಯರು ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಆರೋಪಿಯನ್ನು ಸಾರ್ವಜನಿಕರಿಗೆ ಒಪ್ಪಿಸುವಂತೆ ಒತ್ತಾಯಿಸಿದ ಕಾರಣ ಠಾಣೆಯ ಎದುರು ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
ಘಟನೆಯ ಬಳಿಕ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಬಾಲಕಿಯನ್ನು ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಗೋಕಾಕ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.