ಫೆಬ್ರವರಿ 5, 6 ಹಾಗೂ 7 ರಂದು ಕಲಬುರಗಿಯಲ್ಲಿ ನಡೆಯಲಿರುವ 85ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಗೌರವಧನ ನೀಡೋಕೆ ಮುಂದಾಗಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸುವರ್ಣಾ ಹಣಮಂತ ಮಾಲಾಜಿ, ಉಪಾಧ್ಯಕ್ಷೆ ಶೋಭಾ ಸಿದ್ದು ಸಿರಸಗಿ, ಸ್ಥಾಯಿ ಸಮಿತಿ ಅಧ್ಯಕ್ಷರು ಸೇರಿದಂತೆ ಎಲ್ಲಾ ಜಿಲ್ಲಾ ಪಂಚಾಯಿತಿ ಸದಸ್ಯರು ತಮ್ಮ ಒಂದು ತಿಂಗಳ ಗೌರವಧನ ನೀಡುವುದಾಗಿ ಜಿಲ್ಲಾ ಪಂಚಾಯಿತಿ ನೂತನ ಸಭಾಂಗಣದಲ್ಲಿ ನಡೆದ 17ನೇ ಸಾಮಾನ್ಯ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ.
ಜಿಲ್ಲಾ ಪಂಚಾಯಿತಿ ಅಧ್ಯಕ್ಷರ 35,000 ರೂ. ಉಪಾಧ್ಯಕ್ಷರ 15000 ರೂ., ಸ್ಥಾಯಿ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯರು ಸೇರಿ 45 ಜನರ ಸದಸ್ಯರ 2,25,000 ರೂ ಗಳಂತೆ ಒಟ್ಟು 2,75,000 ರೂ ಗಳನ್ನು ಸಾಹಿತ್ಯ ಸಮ್ಮೇಳನಕ್ಕೆ ನೀಡಲು ನಿರ್ಧರಿಸಲಾಗಿದೆ.