Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು: ಶಾಲೆಯಲ್ಲಿ ತನ್ನ ಮೇಲಾಗುತ್ತಿದ್ದ ಕಿರುಕುಳದಿಂದ ಬೇಸತ್ತು 9 ನೇ ತರಗತಿ ವಿದ್ಯಾರ್ಥಿನಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ವಿದ್ಯಾರ್ಥಿನಿ ಸ್ನ್ಯಾಕ್ಸ್ ತೆಗೆದುಕೊಂಡು ಹೋಗುತ್ತಿದ್ದುದನ್ನು ಗಮನಿಸಿದ ಶಾಲೆ ಪ್ರಾಂಶುಪಾಲರು ಆಕೆಗೆ ಎಚ್ಚರಿಕೆ ಕೊಟ್ಟಿದ್ದರು. ಇದರ ಬಗ್ಗೆ ವಿದ್ಯಾರ್ಥಿನಿ ತಾಯಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದರು.
ಇದಾದ ಬಳಿಕ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಲಾಗುತ್ತಿತ್ತು. ಇದರಿಂದ ಮನನೊಂದು ಆಕೆ ವಾಕಿಂಗ್ ಹೋಗುತ್ತೇನೆಂದು ಹೋಗಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.