ಅಪ್ರಾಪ್ತ ಬಾಲಕನೊಂದಿಗೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ 10 ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಆರೋಪಿ ಮೊಹ್ಮದ್ ಅಶ್ರ (37) ಎಂಬಾತನಿಗೆ ಮಂಗಳೂರಿನ 2 ನೇ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯ ಹಾಗೂ ಫೊಕ್ಸೋ ವಿಶೇಷ ನ್ಯಾಯಾಲಯ ಈ ತೀರ್ಪು ನೀಡಿದೆ.
2016 ರಲ್ಲಿ ಆರೋಪಿಯು ಬಾಲಕನೊಬ್ಬನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದನು.
ನ್ಯಾಯಾಧೀಶರಾದ ಬಿ.ಆರ್.ಪಲ್ಲವಿ ಅವರು ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.