ಮಂಡ್ಯ : ಬಿಜೆಪಿ ಸರ್ಕಾರದ ಪತನವಾಗುತ್ತದೆ ಎಂದ ಕೋಡಿ ಮಠದ ಶ್ರೀಗಳಿಗೆ ಮಂಡ್ಯ ಬಿಜೆಪಿ ಕಾರ್ಯಕರ್ತ ಸವಾಲೊಂದನ್ನು ಹಾಕಿದ್ದಾರೆ.
ಕೋಡಿ ಮಠದ ಸ್ವಾಮಿಗಳು ಇನ್ನು 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾಗುತ್ತದೆ ಎಂದು ಹೇಳಿದರು. ಇದನ್ನು ಖಂಡಿಸಿದ ಮಂಡ್ಯ ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಸ್ವಾಮಿಗಳಿಗೆ ಸವಾಲೊಂದನ್ನು ಎಸೆದಿದ್ದಾರೆ.
ಒಂದು ವೇಳೆ 3-4 ತಿಂಗಳಲ್ಲಿ ಬಿಜೆಪಿ ಸರ್ಕಾರ ಪತನವಾದರೆ ಹೆಬ್ಬೆರಳು ಕಟ್ ಮಾಡಿಕೊಂಡು ನಿಮ್ಮ ಪಾದಕ್ಕೆ ಅರ್ಪಿಸುತ್ತೇನೆ. ಒಂದು ವೇಳೆ ಸರ್ಕಾರ ಅವಧಿ ಪೂರ್ಣಗೊಳಿಸಿದರೆ ಶ್ರೀಗಳು ನನ್ನನ್ನು ಮಠದ ಶಿಷ್ಯನಾಗಿ ಸ್ವೀಕರಿಸುಬೇಕು ಎಂದು ಶಿವಕುಮಾರ್ ಆಗ್ರಹಿಸಿದ್ದಾರೆ.