300 ರೋಪಾಯಿ ಕಳ್ಳತನದ ಆರೋಪ ಹೊರಿಸಿ ಅಪ್ರಾಪ್ತ ಬಾಲಕನನ್ನು ವಿವಸ್ತ್ರಗೊಳಿಸಿ ರಸ್ತೆಯಲ್ಲಿ ಮೆರವಣಿಗೆ ನಡೆಸಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.
17 ವರ್ಷದ ಅಪ್ರಾಪ್ತ ಬಾಲಕನನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದ ಕೂಡಲೇ ಸಂತ್ರಸ್ತ ಅಪ್ರಾಪ್ತ ಬಾಲಕ ಕಲ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುತ್ತಿದ್ದಾರೆ.