ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಈ ವರ್ಷದ ಕನ್ನಡ ರಾಜ್ಯೋತ್ಸವ ಅದ್ದೂರಿಯಾಗಿ ಆಚರಿಸಲು ರಾಜ್ಯ ಸರ್ಕಾರ ಕರೆ ಕೊಟ್ಟಿದೆ.
ಮನೆ ಮನೆಯಲ್ಲೂ ಕನ್ನಡದ ಬಾವುಟ ಹಾರಲಿ, ಕನ್ನಡ ಜೋತಿ ಬೆಳಗಲಿ ಎಂದು ರಾಜ್ಯದ ಜನರಿಗೆ ಕರೆ ನೀಡಲಾಗಿದೆ. ಈ ಬಗ್ಗೆ ಅರಿವು ಮೂಡಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಸುತ್ತೋಲೆ ಹೊರಡಿಸಿದ್ದಾರೆ.